ಜಿಲ್ಲೆ

ಇಂದು ಮಿಕ್ಕೆರೆಯಲ್ಲಿ ಆರೋಗ್ಯ ತಪಾಸಣೆ ಶಿಬಿರ

ಮಳವಳ್ಳಿ: ತಾಲೂಕಿನ ಮಿಕ್ಕೆರೆ ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಪ್ರಯುಕ್ತ ಏ.13ರಂದು ಆರೋಗ್ಯ ಉಚಿತ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಗಿದೆ. ಗ್ರಾಮದ ಡಾ.ಬಿ.ಆರ್. ಅಂಬೇಡ್ಕರ್ ಯುವಕರ ಸಂಘ ಹಾಗೂ ಮಂಡ್ಯ ಸಾಂಜೋ ಆಸ್ಪತ್ರೆ ಸಹಯೋಗದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಬೆಳಗ್ಗೆ 10 ಗಂಟೆಯಿಂದ ಆರೋಗ್ಯ ತಪಾಸಣೆ ಪ್ರಾರಂಭವಾಗಲಿದ್ದು, ಶಿಬಿರದಲ್ಲಿ ನುರಿತ ತಜ್ಞ ವೈದ್ಯರ ತಂಡ ಪಾಲ್ಗೊಂಡು ಎಲ್ಲ ರೀತಿಯ ಆರೋಗ್ಯ ತಪಾಸಣೆ ನಡೆಸುವುದರ ಜತೆಗೆ ಆರೋಗ್ಯ ಪಾಲನೆ ಬಗ್ಗೆ ಉತ್ತಮ ಸಲಹೆಗಳನ್ನು ನೀಡಲಿದ್ದಾರೆ ಎಂದು ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.