ಅರಕಲಗೂಡು: ತಾಲೂಕಿನ ವಿವಿಧೆಡೆ ಕೂಲಿ ಕೆಲಸ ಮಾಡುತ್ತಿದ್ದ ಪಶ್ವಿಮ ಬಂಗಾಳದ ಕಾರ್ಮಿಕರನ್ನು ಗುರುವಾರ ತಾಲೂಕು ಆಡಳಿತ ವತಿಯಿಂದ ತಾಯ್ನಡಿಗೆ ಕಳುಹಿಸಿ ಕೊಡಲಾಯಿತು.
ತಹಸೀಲ್ದಾರ್ ವೈ.ಎಂ.ರೇಣುಕುಮಾರ್ ಮಾತನಾಡಿ, ತಾಲೂಕಿನಲ್ಲಿ ಕೂಲಿ ಕೆಲಸಕ್ಕೆ ಬಂದಿದ್ದ ಪಶ್ಚಿಮ ಬಂಗಾಳದ 28 ಕಾರ್ಮಿಕರು ಲಾಕ್‌ಡೌನ್‌ನಿಂದಾಗಿ ತವರಿಗೆ ಮರಳಲು ಸಾಧ್ಯವಾಗಿರಲಿಲ್ಲ. ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ಕಾರ್ಮಿಕರು ತವರಿಗೆ ತೆರಳು ಸೇವಾಸಿಂಧು ಆ್ಯಪ್‌ನಲ್ಲಿ ಹೆಸರು ನೋಂದಾಯಿಸಿಕೊಂಡಿದ್ದರು. ಅದರಂತೆ ಈಗ ಕಳುಹಿಸಿಕೊಡಲಾಗುತ್ತಿದೆ ಎಂದರು.
ಆರೋಗ್ಯ ಇಲಾಖೆ ವತಿಯಿಂದ ಕಾರ್ಮಿಕರ ಆರೋಗ್ಯವನ್ನು ತಪಾಸಣೆ ಮಾಡಲಾಯಿತು. ತಹಸೀಲ್ದಾರ್ ವೈ.ಎಂ.ರೇಣುಕುಮಾರ್, ತಾಲೂಕು ಆರೋಗ್ಯಾಧಿಕಾರಿ ಡಾ.ಸ್ವಾಮಿಗೌಡ, ಸರ್ಕಾರಿ ಆಸ್ಪತ್ರೆ ಎನ್.ಸಿ.ಡಿ. ವಿಭಾಗದ ಅರುಣ್ ಕುಮಾರ್ ಇದ್ದರು.