ಜಿಲ್ಲೆ

ಆರೋಗ್ಯ ತಪಾಸಣೆ ಉಚಿತ ಶಿಬಿರ

ಸೌಮ್ಯ ಆರ್

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಬೆಳ್ತಂಗಡಿ ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಮುಂಡಾಜೆ ವಲಯ, ಕುಕ್ಕಾವು ಶೌರ್ಯ ವಿಪತ್ತು ನಿರ್ವಹಣಾ ಘಟಕ, ಕುಕ್ಕಾವು ಜನಜಾಗೃತಿ ಸಮಿತಿ ಸಹಕಾರದೊಂದಿಗೆ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಉಜಿರೆ ಎಸ್‌ಡಿಎಂ ಆಸ್ಪತ್ರೆ ತಜ್ಞ ವೈದ್ಯರಿಂದ ಕುಕ್ಕಾವು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಉಚಿತ ತಪಾಸಣಾ ಶಿಬಿರ ನಡೆಯಿತು.

ಕೂಡಬೆಟ್ಟು ಸದಾಶಿವೇಶ್ವರ ದೇವಸ್ಥಾನ ಮೊಕ್ತೇಸರ ವಾಸುದೇವ ಕಕ್ಕೆನೇಜಿ ಶಿಬಿರ ಉದ್ಘಾಟಿಸಿದರು. ಉಜಿರೆ ಎಸ್‌ಡಿಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಮೇಲ್ವಿಚಾರಕ ರವೀಂದ್ರ ಗುಡಿಗಾರ್ ಎಸ್‌ಡಿಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದೊರೆಯುವ ವೈದ್ಯಕೀಯ ಸೇವೆಗಳ ಮಾಹಿತಿ ನೀಡಿದರು.

ಕುಕ್ಕಾವು ಗ್ರಾಪಂ ಅಧ್ಯಕ್ಷ ವಿನಯಚಂದ್ರ ಗೌಡ ಅಧ್ಯಕ್ಷತೆ ವಹಿಸಿದ್ದರು. ಉಜಿರೆ ಎಸ್‌ಡಿಎಂ ಆಸ್ಪತ್ರೆಯ ಮಕ್ಕಳ ತಜ್ಞ ಡಾ.ಪ್ರತೀತ್, ಮೂಳೆ ಶಸ್ತ್ರಚಿಕಿತ್ಸಾ ತಜ್ಞ ಡಾ.ರಜತ್, ಕಣ್ಣಿನ ತಜ್ಞ ಡಾ.ಶುಭಾಶ್ಚಂದ್ರ, ಇ.ಎನ್.ಟಿ ತಜ್ಞರಾದ ಡಾ.ರೋಹನ್ ದೀಕ್ಷಿತ್, ಜನರಲ್ ಫಿಸಿಷಿಯನ್ ಡಾ.ಪ್ರೌಸ್ಟಿಲ್, ಡಾ.ಆದರ್ಶ ತಪಾಸಣೆ ನಡೆಸಿಕೊಟ್ಟರು. 504 ಮಂದಿ ಶಿಬಿರದ ಸದುಪಯೋಗ ಪಡೆದುಕೊಂಡರು.

ತಾಲೂಕು ಯೋಜನಾಧಿಕಾರಿ ಯಶೋಧರ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹರೀಶ್ ಮಾಂಜ, ಜನಜಾಗೃತಿ ಗ್ರಾಮ ಸಮಿತಿ ಅಧ್ಯಕ್ಷ ನೋಣಯ್ಯ ಗೌಡ, ಬಂಗಾಡಿ ಸಿಎ ಬ್ಯಾಂಕ್ ಉಪಾಧ್ಯಕ್ಷ ಆನಂದ ಗೌಡ, ಒಕ್ಕೂಟ ಅಧ್ಯಕ್ಷ ಜಗದೀಶ್ ಕುಂಬಾರ, ಸುರೇಶ್, ಶೌರ್ಯ ವಿಪತ್ತು ಘಟಕದ ಪ್ರತಿನಿಧಿ ಲೋಕೇಶ್ ಕುಂಬಾರು ಉಪಸ್ಥಿತರಿದ್ದರು. ಜ್ಞಾನವಿಕಾಸ ಸಮನ್ವಯಾಧಿಕಾರಿ ಮಧುರಾ ವಸಂತ್ ಕಾರ್ಯಕ್ರಮ ನಿರೂಪಿಸಿದರು. ಜ್ಞಾನ ವಿಕಾಸ ಕೇಂದ್ರದ ಸದಸ್ಯೆ ತ್ರಿವೇಣಿ ಸ್ವಾಗತಿಸಿದರು. ವಲಯ ಮೇಲ್ವಿಚಾರಕ ಜನಾರ್ದನ್ ವಂದಿಸಿದರು. ಸೇವಾ ಪ್ರತಿನಿಧಿ ರಶ್ವಿ ಸುರೇಖಾ, ಶೌರ್ಯವಿಪತ್ತು ನಿರ್ವಹಣಾ ಘಟಕ, ಮತ್ತು ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಸಹಕರಿಸಿದರು.