ಮೂಡಬಿದ್ರೆಯ ಬ್ರಹ್ಮಶ್ರೀ ನಾರಾಯಣಗುರು ಸಭಾಂಗಣ ಕಡಂದಲೆಯಲ್ಲಿ ನಡೆದ ಬೃಹತ್ ಉಚಿತ ಆರೋಗ್ಯ- ದಂತ- ಕಣ್ಣಿನ ತಪಾಸಣಾ ಶಿಬಿರವನ್ನು ಶ್ರೀಶಾ ಸೊಸೈಟಿಯ ಅಧ್ಯಕ್ಷ ಎಂ.ಎಸ್.ಗುರುರಾಜ್ ಉದ್ಘಾಟಿಸಿದರು. 
ಜಿಲ್ಲೆ

ಶ್ರೀಶಾ ಸೌಹಾರ್ದ ಸೊಸೈಟಿಯಿಂದ ಆರೋಗ್ಯ ತಪಾಸಣಾ ಶಿಬಿರ

ಮಂಗಳೂರು: ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ, ಯುವವಾಹಿನಿ ಮೂಡುಬಿದ್ರೆ ಮತ್ತು ಇನ್ನಿತರ ಸ್ಥಳೀಯ ಸಂಘ ಸಂಸ್ಥೆಗಳು ಹಾಗೂ ಶ್ರೀಸತ್ಯಸಾಯಿ ಬಾಲವಿಕಾಸ ಕೇಂದ್ರ ಮಂಗಳಾದೇವಿ ಇವುಗಳ ಸಹಕಾರದೊಂದಿಗೆ ಮೂಡಬಿದ್ರೆಯ ಬ್ರಹ್ಮಶ್ರೀ ನಾರಾಯಣಗುರು ಸಭಾಂಗಣ ಕಡಂದಲೆಯಲ್ಲಿ ಬೃಹತ್ ಉಚಿತ ಆರೋಗ್ಯ- ದಂತ- ಕಣ್ಣಿನ ತಪಾಸಣಾ ಶಿಬಿರ ಆಯೋಜಿಸಿತ್ತು.

ಶ್ರೀಶಾ ಸೊಸೈಟಿಯ ಅಧ್ಯಕ್ಷ ಎಂ.ಎಸ್.ಗುರುರಾಜ್ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಮಂಗಳೂರಿನ ಅತ್ತಾವರ ಕೆ.ಎಂ.ಸಿ. ಆಸ್ಪತ್ರೆಯ ಹಾಗೂ ದೇರಳಕಟ್ಟೆಯ ಯೇನಪೊಯ ದಂತ ಕಾಲೇಜಿನ ವೈದ್ಯರು ಈ ಶಿಬಿರದಲ್ಲಿ ಭಾಗವಹಿಸಿದ್ದರು. ಒಟ್ಟು 300 ಕ್ಕೂ ಮಿಕ್ಕಿ ರೋಗಿಗಳು ಈ ಶಿಬಿರದ ಸದುಪಯೋಗ ಪಡಿಸಿಕೊಂಡರು.

ಕಣ್ಣಿನ ಸಮಸ್ಯೆ ಇದ್ದ 42 ಜನರಿಗೆ ಸ್ಥಳದಲ್ಲೇ ಉಚಿತವಾಗಿ ಕನ್ನಡಕ, ಎಲ್ಲಾ ಖಾಯಿಲೆಗಳಿಗೆ ಔಷಧಿಗಳನ್ನು ಉಚಿತವಾಗಿ ನೀಡಲಾಯಿತು. ಹೆಚ್ಚಿನ ಚಿಕಿತ್ಸೆ ಆವಶ್ಯಕತೆಯುಳ್ಳವನ್ನು ಕೆಎಂಸಿ ಅತ್ತಾವರ ಆಸ್ಪತ್ರೆಗೆ ಹಾಗೂ ಹಲ್ಲಿನ ಸಮಸ್ಯೆಯುಳ್ಳವರಿಗೆ ದೇರಳಕಟ್ಟೆ ಯೆನೆಪೋಯ ದಂತ ಆಸ್ಪತ್ರೆಗೆ ಬರಲು ಸೂಚಿಸಲಾಗಿದೆ. ಅನೇಕರಿಗೆ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆಯ ಆವಶ್ಯಕತೆಯಿದ್ದು ಅವರಿಗೆ ಸಂಪೂರ್ಣ ಉಚಿತವಾಗಿ ಶಸ್ತ್ರಚಿಕತ್ಸೆ ಮಾಡಲು ವ್ಯವಸ್ಥೆ ಮಾಡಲಾಯಿತು.

ಶ್ರೀಶಾ ಸೊಸೈಟಿಯ ಉಪಾಧ್ಯಕ್ಷ ಉದಯ್ ವಿ. ಶಾಸ್ತ್ರಿ, ಶ್ರೀಶಾ ಸೊಸೈಟಿಯ ನಿರ್ದೇಶಕ ಹಾಗೂ ಶ್ರೀ ಸತ್ಯಸಾಯಿ ಬಾಲವಿಕಾಸ ಕೇಂದ್ರದ ಸಂಚಾಲಕ ಸುರೇಶ್ ಬೈಂದೂರ್ ಸಹಿತ ಹಲವರು ಇದ್ದರು.