ಯಕ್ಸಂಬಾ ಪಟ್ಟಣದಲ್ಲಿರುವ ಸಚಿವೆ ಶಶಿಕಲಾ ಜೊಲ್ಲೆ ಅವರ ನಿವಾಸದಲ್ಲಿ ಸೋಮವಾರ ಬಿಜೆಪಿ ಸಂಸ್ಥಾಪನಾ ದಿನ ಆಚರಿಸಲಾಯಿತು. ಸಚಿವೆ ಶಶಿಕಲಾ ಜೊಲ್ಲೆ, ಸಂಸದ ಅಣ್ಣಾಸಾಹೇಬ ಜೊಲ್ಲೆ , ಆಶಾಜ್ಯೋತಿ ವಿಶೇಷ ಮಕ್ಕಳ ಶಾಲೆಯ ಅಧ್ಯಕ್ಷ ಜ್ಯೋತಿಪ್ರಸಾದ ಜೊಲ್ಲೆ, ಬಸವಜ್ಯೋತಿ ಯೂಥ್ ಫೌಂಡೇಷನ್ ಅಧ್ಯಕ್ಷ ಬಸವಪ್ರಸಾದ ಜೊಲ್ಲೆ ಇತರರು ಇದ್ದರು. 
ಜಿಲ್ಲೆ

ಆರೋಗ್ಯ ಇಲಾಖೆ ಸಿಬ್ಬಂದಿ ಸೇವೆಗೆ ಮೆಚ್ಚುಗೆ

ಚಿಕ್ಕೋಡಿ: ಬಿಜೆಪಿ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಕರೊನಾ ಯೋಧರಿಗಾಗಿ ಒಪ್ಪೊತ್ತಿನ ಉಪಾವಾಸ ಮಾಡಲು ಕರೆ ನೀಡಿದ್ದರು. ಅವರ ಕರೆಗೆ ಓಗೊಟ್ಟು ನಾನು ಸಹ ಉಪವಾಸ ಮಾಡಿದ್ದೇನೆ ಎಂದು ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದ್ದಾರೆ.

ಬಿಜೆಪಿ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಸೋಮವಾರ ಪಟ್ಟಣದ ಪಕ್ಷದ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಕರೊನಾ ನಿಯಂತ್ರಿಸಲು ಪೊಲೀಸರು, ಆರೋಗ್ಯ ಇಲಾಖೆ ಸಿಬ್ಬಂದಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಅವರ ಕಾರ್ಯಕ್ಕೆ ನಿಜಕ್ಕೂ ಸಲಾಂ ಹೇಳಲೇಬೇಕು ಎಂದರು. ಸಚಿವೆ ಶಶಿಕಲಾ ಜೊಲ್ಲೆ, ಆರ್‌ಎಸ್‌ಎಸ್ ಪ್ರಮುಖ ಸಂಜಯ ಅಡಕೆ, ಉದ್ಯಮಿ ಸಂಜಯ ಅರಗೆ ಇತರರು ಉಪಸ್ಥಿತರಿದ್ದರು.