ಸಿರಿಗೆರೆ: ಗುಣಮಟ್ಟದ ಸೇವೆಯೊಂದಿಗೆ ರೋಗಿಗಳ ಸುರಕ್ಷತೆ ಕಾಪಾಡಬೇಕಿರುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಬಿ.ಎ.ಗಿರೀಶ್ ಅಭಿಪ್ರಾಯಪಟ್ಟರು.
ಇಲ್ಲಿನ ವಿಜಾಪುರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ವಿಶ್ವ ರೋಗಿಗಳ ಸುರಕ್ಷತಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿ, ರೋಗಿಗಳನ್ನು ಉತ್ತಮ ಶುಶ್ರೂಷೆಯಿಂದ ಗುಣಪಡಿಸುವುದು ವೈದ್ಯರ ಜವಾಬ್ದಾರಿಯಾಗಿದೆ ಎಂದರು.
ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ್ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿ, 2019ರಿಂದ ಸೆ.17ರ ದಿನವನ್ನು ಒಂದೊಂದು ಘೋಷವಾಕ್ಯದೊಂದಿಗೆ ರೋಗಿಗಳ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.
ಆರೋಗ್ಯ ರಕ್ಷಣೆಯ ಸಮಯದಲ್ಲಿ ರೋಗಿಗಳಿಗೆ ಸಂಭವಿಸುವ ಅಪಾಯಗಳು, ದೋಷಗಳು ಮತ್ತು ಹಾನಿಯನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವುದು ಇದರ ಗುರಿಯಾಗಿದೆ ಎಂದರು.
ವಿಜಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಜಯಶ್ರೀ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಗಂಗಾಧರ ರೆಡ್ಡಿ, ಕಾತ್ಯಾಯನಮ್ಮ, ಆಶಾ ಕಾರ್ಯಕರ್ತೆಯರು ಇದ್ದರು.