oplus_2 
ಜಿಲ್ಲೆ

ಆರೋಗ್ಯ ರಕ್ಷಣೆಗೆ ಪ್ರತಿಯೊಬ್ಬರಲ್ಲೂ ವಿಶೇಷ ಕಾಳಜಿ ಅಗತ್ಯ - ತಾಲೂಕು ಆರೋಗ್ಯಾಽಕಾರಿ ಡಾ.ದೀಪಕ್ ರೈ ಸಲಹೆ

Mangaluru - Nishantha Narayana


ಪುತ್ತೂರು: ತಂಬಾಕು ಸೇವನೆಯಿಂದ ಕ್ಯಾನ್ಸರ್ ನಂತಹ ಮಾರಕ ಕಾಯಿಲೆಗಳು ಬರುತ್ತವೆ. ಆರೋಗ್ಯ ರಕ್ಷಣೆಗೆ ಪ್ರತಿಯೊಬ್ಬರೂ ವಿಶೇಷ ಕಾಳಜಿ ವಹಿಸುವ ಅಗತ್ಯವಿದೆ. ಕಾರ್ಮಿಕರು ಆರೋಗ್ಯ ಕಾಳಜಿಯಿಂದ ದೂರವಿದ್ದು, ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ತಾಲೂಕು ಆರೋಗ್ಯಾಽಕಾರಿ ಡಾ.ದೀಪಕ್ ರೈ ಹೇಳಿದರು.


ನಗರಸಭಾ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಽಕಾರಿಗಳ ಕಚೇರಿ ಪುತ್ತೂರು, ನಗರಸಭೆ ಪುತ್ತೂರು, ಸಾರ್ವಜನಿಕ ಆರೋಗ್ಯ ಆಸ್ಪತ್ರೆ ಪುತ್ತೂರು ಮತ್ತು ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಪುತ್ತೂರು ಸಹಯೋಗದಲ್ಲಿ ರಾಷ್ಟ್ರೀಯ ಬಾಯಿಯ ಆರೋಗ್ಯ ಕಾರ್ಯಕ್ರಮದಡಿ ನಗರಸಭಾ ಪೌರ ಕಾರ್ಮಿಕರಿಗೆ ತಂಬಾಕು ಸೇವನೆಯ ದುಷ್ಪರಿಣಾಮ ಮಾಹಿತಿ ಹಾಗೂ ಬಾಯಿ ಆರೋಗ್ಯ ಸ್ಕ್ರೀನಿಂಗ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.


ನಗರಸಭಾ ಕಾರ್ಯಪಾಲಕ ಅಭಿಯಂತರ (ಪರಿಸರ) ಶಬರಿನಾಥ್ ಮಾತನಾಡಿ, ನಗರ ಆರೋಗ್ಯ ಕಾಪಾಡುವ ಪೌರ ಕಾರ್ಮಿಕರ ಆರೋಗ್ಯ ಕಾಳಜಿ ವಹಿಸುವ ಜವಾಬ್ದಾರಿ ನಮಗೂ ಇದೆ. ಈ ನಿಟ್ಟಿನಲ್ಲಿ ಪೌರ ಕಾರ್ಮಿಕರಿಗೆ ಆರೋಗ್ಯ ಮಾಹಿತಿ ಹಾಗೂ ತಪಾಸಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.


ಪಿಪಿಟಿ ಮೂಲಕ ಆರೋಗ್ಯ ಮಾಹಿತಿ, ಆರೋಗ್ಯ ತೊಪಾಸಣೆ ನಡೆಯಿತು. ಸರ್ಕಾರಿ ಆಸ್ಪತ್ರೆಯ ವೈದ್ಯ ಡಾ.ಜಯದೀಪ್, ಡಾ. ಸುಶ್ಮಿತಾ ಉಪಸ್ಥಿತರಿದ್ದರು. ನಗರಸಭೆಯ ಸಮುದಾಯ ಸಂಘಟಕ ಕರುಣಾಕರ ಕಾರ್ಯಕ್ರಮ ನಿರೂಪಿಸಿದರು. ಆರೋಗ್ಯ ಶಿಕ್ಷಣಾಽಕಾರಿ ಪದ್ಮಾವತಿ ಸಹಕರಿಸಿದರು.