ಜಿಲ್ಲೆ

ನಿಯಮಿತ ರಕ್ತದಾನದಿಂದ ಆರೋಗ್ಯ ವೃದ್ಧಿ, ಶಿಬಿರದಲ್ಲಿ ಸಂಗ್ರವಾರ 298 ಯೂನಿಟ್ ರಕ್ತ ರಾಷ್ಟ್ರೋತ್ಥಾನ ರಕ್ತನಿಧಿಗೆ ಹಸ್ತಾಂತರ

Bengaluru Rural

ದೇವನಹಳ್ಳಿ: ಸ್ವಾತಂತ್ರ್ಯ ಹೋರಾಟಗಾರ ಚಂದ್ರಶೇಖರ್ ಆಜಾದ್ ಅವರ 114ನೇ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರದಲ್ಲಿ 298 ಯೂನಿಟ್ ರಕ್ತ ಸಂಗ್ರಹ ಮಾಡಿ ರಾಷ್ಟ್ರೋತ್ಥಾನ ರಕ್ತನಿಧಿಗೆ ಹಸ್ತಾಂತರಿಸಲಾಗಿದೆ ಎಂದು ಯುವಮೋರ್ಚಾ ಅಧ್ಯಕ್ಷ ಎಸ್.ಮೋಹನಕುಮಾರ್ ತಿಳಿಸಿದರು.

ಪಟ್ಟಣದ ಗುರುಭವನದಲ್ಲಿ ತಾಲೂಕು ಬಿಜೆಪಿ ಯುವಮೋರ್ಚಾ ಹಾಗೂ ರಾಷ್ಟ್ರೋತ್ಥಾನ ರಕ್ತನಿಧಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಚಂದ್ರಶೇಖರ್ ಆಜಾದ್ ಜಯಂತಿ ಅಂಗವಾಗಿ ಸ್ವಯಂಪ್ರೇರಿತ ರಕ್ತದಾನ ಶಿಬಿರದಲ್ಲಿ ಮಾತನಾಡಿದರು.

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎ.ರವಿ ಮಾತನಾಡಿ, ರಕ್ತದಾನ ಅತ್ಯಂತ ಶ್ರೇಷ್ಠ ದಾನವಾಗಿದ್ದು, ಯಾರೇ ಪ್ರಾಣಾಪಾಯದಲ್ಲಿದ್ದರೂ ಜಾತಿ, ಮತ , ಪಕ್ಷ ಭೇದವಿಲ್ಲದೇ ಪ್ರಾಣ ಉಳಿಸಲು ದಾನಿಗಳ ರಕ್ತ ನೆರವಾಗಲಿದೆ. ಅಂತಹ ಮಹತ್ಕಾರ್ಯವನ್ನು ಸ್ವಾತಂತ್ರ್ಯ ಸೇನಾನಿಗಳ ಹೆಸರಿನಲ್ಲಿ ಮಾಡುತ್ತಿರುವುದು ಉತ್ತಮವಾದ ಸೇವೆಯಾಗಿದೆ ಎಂದರು.

ರೈತ ಮೋರ್ಚಾದ ಮಾಜಿ ಉಪಾಧ್ಯಕ್ಷ ಎಂ.ನಾರಾಯಣಗೌಡ ಮಾತನಾಡಿ, ವರ್ಷದಲ್ಲಿ ಕನಿಷ್ಠ ಎರಡು ಬಾರಿ ರಕ್ತದಾನ ಮಾಡಬಹುದು. ಇದರಿಂದ ಉತ್ತಮ ಆರೋಗ್ಯ ಹೊಂದಲು ಸಾಧ್ಯ ಎಂದರು.

ಮಾಜಿ ಶಾಸಕ ಜಿ.ಚಂದ್ರಣ್ಣ, ರಾಜ್ಯಪರಿಷತ್ ಸದಸ್ಯ ದೇ.ಸೂ.ನಾಗರಾಜ್, ಬಯಾಪ ಮಾಜಿ ಅಧ್ಯಕ್ಷ ಸಿ.ಅಶ್ವತ್ಥನಾರಾಯಣ್,ಜಿಲ್ಲಾ ಬಿಜೆಪಿ ಅಧ್ಯಕ್ಷ ಎ.ವಿ.ನಾರಾಯಣಸ್ವಾಮಿ, ರಾಜ್ಯ ಬಿಜೆಪಿ ಎಸ್‌ಸಿ ಮೋರ್ಚಾ ಉಪಾಧ್ಯಕ್ಷ ಕೆ.ನಾಗೇಶ್, ತಾಲೂಕು ಬಿಜೆಪಿ ಅಧ್ಯಕ್ಷ ಸುಂದರೇಶ ಸುನಿ, ತಾಲೂಕು ಕಾರ್ಯದರ್ಶಿ ನೀಲೇರಿ ಮಂಜುನಾಥ್, ಜಿಲ್ಲಾ ಎಸ್‌ಟಿ ಮೋರ್ಚಾ ಅಧ್ಯಕ್ಷ ಮಂಜುನಾಥ್, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಎಚ್.ಎಂ.ರವಿಕುಮಾರ್, ಮಹಿಳಾ ಘಟಕದ ಅಧ್ಯಕ್ಷೆ ನಾಗವೇಣಿ, ಉಪಾಧ್ಯಕ್ಷೆ ಆರ್.ಪುನೀತ್, ಎಸ್‌ಸಿ ಮೋರ್ಚಾ ಅಧ್ಯಕ್ಷ ಗಣೇಶಬಾಬು, ಕಾರ್ಯದರ್ಶಿ ಸಾಗರ್, ಯುವ ಮೋರ್ಚಾದ ಸದಸ್ಯ ಲೋಹಿತ್, ಮಾಧ್ಯಮ ಪ್ರಮುಖ್ ಎಸ್.ರಮೇಶ್‌ಕುಮಾರ್, ಉಪಾಧ್ಯಕ್ಷ ರಾಮಕೃಷ್ಣ ಹೆಗ್ಗಡೆ ಮತ್ತಿತರರಿದ್ದರು.