ವಿರಾಜಪೇಟೆ ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ಆಯೋಜಿಸಿದ್ದ ಪಿಸಿಒಡಿ ಮತ್ತು ಸರ್ವಿಕಲ್ ಕ್ಯಾನ್ಸರ್ ಮಾಹಿತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕ್ರೆಡೋ ಮೆಡಿಕಲ್ ಸೆಂಟರ್ ವೈದ್ಯ ಡಾ.ಮೇಜರ್ ಅಲ್ಲಂ ಪ್ರಭು ಅವರಿಗೆ ನೆನಪಿನ ಕಾಣಿಕೆ ನೀಡಲಾಯಿತು. ತೃಪ್ತಿ ಬೋಪಣ್ಣ, ಮುತ್ತಮ್ಮ, ಸುನೀತಾ ಇದ್ದರು. 
ಜಿಲ್ಲೆ

ನಿಯಮಿತ ಆಹಾರ ಸೇವನೆಯಿಂದ ಆರೋಗ್ಯ

ನಾಗೇಶ ಎಸ್

ವಿರಾಜಪೇಟೆ: ಪಟ್ಟಣದ ಸೇಂಟ್ ಆನ್ಸ್ ಪದವಿ ಕಾಲೇಜಿನ ಐಕ್ಯೂಎಸಿ ಘಟಕ ಮತ್ತು ಮಹಿಳಾ ಘಟಕದ ಸಹಯೋಗದಲ್ಲಿ ಕಾಲೇಜಿನಲ್ಲಿ ಪಿಸಿಒಡಿ ಮತ್ತು ಸರ್ವಿಕಲ್ ಕ್ಯಾನ್ಸರ್ ಬಗ್ಗೆ ಮಾಹಿತಿ ಕಾರ್ಯಕ್ರಮ ಮತ್ತು ಆರೋಗ್ಯ ಜಾಗೃತಿ ಕಾರ್ಯಕ್ರಮವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು.

ವಿರಾಜಪೇಟೆಯ ಕ್ರೆಡೋ ಮೆಡಿಕಲ್ ಸೆಂಟರ್ ವೈದ್ಯ ಡಾ.ಮೇಜರ್ ಅಲ್ಲಂ ಪ್ರಭು ಮಾತನಾಡಿ, ಪ್ರಸ್ತುತ ಯುಗದಲ್ಲಿ ಆಹಾರ ಕ್ರಮಗಳು ಬದಲಾಗಿದ್ದು, ನಿಯಮಿತ ಆಹಾರ ಸೇವನೆ, ಯೋಗ ಮತ್ತು ಶುಚಿತ್ವದಿಂದ ಮಾತ್ರ ಆರೋಗ್ಯ ರಕ್ಷಣೆ ಸಾಧ್ಯ. ಜತೆಗೆ ಸರ್ವಿಕಲ್ ಕ್ಯಾನ್ಸರ್ ಬಗ್ಗೆ, ಅದರ ನಿಯಂತ್ರಣ ಕ್ರಮಗಳ ಬಗ್ಗೆ ಸವಿವರವಾದ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪದವಿ ಕಾಲೇಜು ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಮಾತನಾಡಿ, ಆರೋಗ್ಯವೇ ಭಾಗ್ಯ ಎಂಬ ಮಾತಿನಂತೆ ಆರೋಗ್ಯದ ರಕ್ಷಣೆ ನಮ್ಮೆಲ್ಲರ ಹೊಣೆ. ನಮ್ಮ ಸುತ್ತ ಮುತ್ತಲಿನ ಪರಿಸರವನ್ನು ಶುಚಿಯಾಗಿಡಬೇಕು ಎಂದು ಕಿವಿಮಾತು ಹೇಳಿದರು.

ಈ ಸಂದರ್ಭದಲ್ಲಿ ಕಾಲೇಜಿನ ಮಹಿಳಾ ಘಟಕದ ಸಂಚಾಲಕರಾದ ಮುತ್ತಮ್ಮ, ಸುನೀತಾ, ಐಕ್ಯೂಎಸಿ ಸಂಚಾಲಕಿ ಹೇಮಾ ಮತ್ತು ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.