ಜಿಲ್ಲೆ

ಡೆಂಘೆಗೆ ಆರೋಗ್ಯಾಧಿಕಾರಿ ಬಲಿ

ಅವಿನಾಶ್ ಜೈನಹಳ್ಳಿ

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ಸಮುದಾಯ ಆರೋಗ್ಯಾಧಿಕಾರಿಯೊಬ್ಬರು ಡೆಂೆಗೆ ಬಲಿಯಾಗಿದ್ದಾರೆ.

ನಾಗೇಂದ್ರ(35)ಮೃತ ಆರೋಗ್ಯಾಧಿಕಾರಿಯಾಗಿದ್ದಾರೆ. ಜಿಲ್ಲೆಯಲ್ಲಿ ಡೆಂೆಗೆ ಬಲಿಯಾದ ಮೊದಲ ಪ್ರಕರಣ ಇದಾಗಿದೆ. ಇವರು ಹುಣಸೂರು ತಾಲೂಕಿನ ಗುರುಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಸೋಮವಾರ ಬೆಳಗ್ಗೆ ಅವರು ಮೃತಪಟ್ಟಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಮೈಸೂರು ಜಿಲ್ಲೆಯಲ್ಲಿ ಡೆಂೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ಹಲವಾರು ಕ್ರಮಗಳನ್ನು ಕೈಗೊಂಡಿದೆ.