ಸುಂಟಿಕೊಪ್ಪ: ಗರಗಂದೂರು ಮುರಾರ್ಜಿ ದೇಸಾಯಿ ವಸತಿ ಶಾಲೆಯ ಕಾಳಜಿ ಕೇಂದ್ರಕ್ಕೆ ಮಂಗಳವಾರ ಶಾಸಕ ಡಾ.ಮಂತರ್‌ಗೌಡ ಭೇಟಿ ನೀಡಿ ಮಳೆ ಹಾನಿ ಸಂತ್ರಸ್ತರ ಅಹವಾಲು ಆಲಿಸಿದರು.
ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದ ಸಂತ್ರಸ್ತರ ಅಗತ್ಯ ಸೌಕರ್ಯ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಯಾರೂ ಭಯ ಪಡುವಂತಹ ಅಗತ್ಯವಿಲ್ಲ, ಗ್ರಾಪಂ, ಜನಪ್ರತಿನಿಧಿಗಳು ನಿಮ್ಮ ಜತೆಗಿದ್ದಾರೆ ಎಂದು ಧೈರ್ಯ ತುಂಬಿದರು.
ಈ ಸಂದರ್ಭ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್, ಹರದೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಬೋಜಮ್ಮ, ಉಪಾಧ್ಯಕ್ಷ ಮುಸ್ತಫಾ, ಕಾರ್ಯನಿರ್ವಹಣಾಧಿಕಾರಿ ಪರಮೇಶ್ವರ್ ಇತರರು ಇದ್ದರು.