ಮಲೆಮಹದೇಶ್ವರ ಬೆಟ್ಟದಲ್ಲಿ ಪೌರ ಕಾರ್ಮಿಕರ ಕಾಲನಿಗೆ ಪ್ರಾಧಿಕಾರದ ಕಾರ್ಯದರ್ಶಿ ಎ.ಈ.ರಘು ಬುಧವಾರ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಿದರು. ಚಂದ್ರಶೇಖರ್, ಸೆಲ್ವ ಗಣಪತಿ, ಗೋವಿಂದ ಇತರರು ಇದ್ದರು. 
ಜಿಲ್ಲೆ

ಮಹದೇಶ್ವರ ಬೆಟ್ಟದ ಪೌರಕಾರ್ಮಿಕರ ಸಮಸ್ಯೆ ಆಲಿಕೆ

ಹನೂರು: ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಪೌರ ಕಾರ್ಮಿಕರ ಕಾಲನಿಗೆ ಬುಧವಾರ ಶ್ರೀ ಮಲೆಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಈ.ರಘು ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಿದರು.

ಈ ವೇಳೆ ಪೌರ ಕಾರ್ಮಿಕರು ಮಾತನಾಡಿ, ನಮಗೆ ಸ್ವಂತ ಮನೆಯಿಲ್ಲದ ಪರಿಣಾಮ ಕಳೆದ ಹಲವು ವರ್ಷಗಳಿಂದಲೂ ಪ್ರಾಧಿಕಾರದ ನೀಡಿರುವ ಮನೆಯಲ್ಲಿ ವಾಸಿಸುತ್ತಿದ್ದೇವೆ. ಆದ್ದರಿಂದ ಪ್ರಾಧಿಕಾರದ ವತಿಯಿಂದಲೇ ಸ್ವಂತ ಮನೆ ನಿರ್ಮಿಸಿಕೊಡುವುದರ ಮೂಲಕ ಅನುಕೂಲ ಕಲ್ಪಿಸುವಂತೆ ಮನವಿ ಮಾಡಿದರು. ಜತೆಗೆ ಕೆಲ ಸಮಸ್ಯೆಗಳ ಬಗ್ಗೆ ಚರ್ಚಿಸಿದರು.

ಇದಕ್ಕೆ ಕಾರ್ಯದರ್ಶಿ ರಘು ಅವರು ಪ್ರತಿಕ್ರಿಯಿಸಿ, ಈ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಮುಂದಿನ ದಿನಗಳಲ್ಲಿ ಗೃಹಭಾಗ್ಯ ಯೋಜನೆಯಡಿ ಮನೆ ನಿರ್ಮಿಸಿ ಕೊಡಲು ಪ್ರಾಧಿಕಾರದ ವತಿಯಿಂದ ನೆರೆವು ನೀಡುವುದರ ಮೂಲಕ ಅನುಕೂಲ ಕಲ್ಪಿಸಲು ಅಗತ್ಯ ಕ್ರಮವಹಿಸುವುದಾಗಿ ಭರವಸೆ ನೀಡಿದರು. ಅಲ್ಲದೆ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಭರವಸೆ ನೀಡಿದರು. ಬಳಿಕ ಮನೆಗಳ ವಸ್ತುಸ್ಥಿತಿಯನ್ನು ಪರಿಶೀಲಿಸಿದರು. ಪ್ರಾಧಿಕಾರದ ಉಪ ಕಾರ್ಯದರ್ಶಿ ಚಂದ್ರಶೇಖರ್, ಇಂಜಿನಿಯರ್ ಸೆಲ್ವ ಗಣಪತಿ, ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ಗೋವಿಂದ ಹಾಗೂ ಇನ್ನಿತರರು ಇದ್ದರು.