ಹಾವೇರಿ: ಹೃದಯಾಘಾತದಿಂದ ಕೆಎಸ್‌ಆರ್‌ಟಿಸಿ ಚಾಲಕ ಕಮ್ ನಿರ್ವಾಹಕ ಮೃತಪಟ್ಟ ಘಟನೆ ನಗರದ ಹೊರವಲಯದ ಸಾರಿಗೆ ಸಂಸ್ಥೆ ಡಿಪೋದಲ್ಲಿ ಭಾನುವಾರ ನಡೆದಿದೆ.
ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ಮತ್ತಿಕೊಪ್ಪ ಗ್ರಾಮದ ಕಲ್ಲಪ್ಪ ಫಕ್ಕೀರಪ್ಪ ಬೈಲವಾಡ (45) ಮೃತ ನೌಕರ.
ಇವರು ಹಾವೇರಿ ಸಾರಿಗೆ ಸಂಸ್ಥೆ ಡಿಪೋದ ವಿಶ್ರಾಂತ ಕೊಠಡಿಯಲ್ಲಿ ಶನಿವಾರ ರಾತ್ರಿ ಮಲಗಿದ್ದರು. ಭಾನುವಾರ ಬೆಳಗ್ಗೆ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ನಗರದ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿತ್ತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.