ಜಿಲ್ಲೆ

ಹೃದಯಾಘಾತದಿಂದ ವಿಚಾರಣಾಧೀನ ಕೈದಿ ಸಾವು

Shivamogga

ಶಿವಮೊಗ್ಗ: ಓತಿಘಟ್ಟದ ಕೇಂದ್ರ ಕಾರಾಗೃಹದಲ್ಲಿನ ವಿಚಾರಣಾಧೀನ ಕೈದಿಯೊಬ್ಬ ಸೋಮವಾರ ಬೆಳಗ್ಗೆ ಹೃದಯಾಘಾತದಿಂದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ಸೋಮಿನಕೊಪ್ಪದ ಸೈಯದ್ ಅಬು ಸಲೆಹಾ (35) ಮೃತ ಕೈದಿ. ಕೊಲೆ ಯತ್ನ ಪ್ರಕರಣದಡಿ ಕೋಟೆ ಠಾಣೆ ಪೊಲೀಸರು ಈತನನ್ನು ಬಂಧಿಸಿದ್ದು 2020ರಿಂದ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆಗೆ ಒಳಗಾಗಿದ್ದ. ಸೋಮವಾರ ಬೆಳಗ್ಗೆ ಕೇಂದ್ರ ಕಾರಾಗೃಹದಲ್ಲೇ ಎದೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಇಸಿಜಿ ಮಾಡಿಸಲಾಗಿತ್ತು.

ಹೆಚ್ಚಿನ ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ಕರೆ ತರಲಾಗಿತ್ತು. ಆದರೆ ಆಸ್ಪತ್ರೆಗೆ ಕರೆತಂದ ಸ್ವಲ್ಪ ಹೊತ್ತನಲ್ಲೇ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.