ಜಿಲ್ಲೆ

ಜು.14 ರಿಂದ ಉತ್ತರ ಕನ್ನಡದಲ್ಲಿ ಭಾರಿ ಮಳೆ ರೆಡ್ ಅಲರ್ಟ್

Uttara Kannada - Subash Hegde


ಕಾರವಾರ: ಜಿಲ್ಲೆಯಲ್ಲಿ ಮಳೆ ಹೆಚ್ಚುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಶುಕ್ರವಾರ ಬೆಳಗಿನ ವರದಿಯಂತೆ ಜಿಲ್ಲೆಯಲ್ಲಿ 8.5 ಮಿಮೀ ಮಾತ್ರ ಮಳೆಯಾಗಿದೆ. ಕಾರವಾರದಲ್ಲಿ ಶುಕ್ರವಾರ ಬೆಳಗಿನಿಂದ ಉತ್ತಮ ಮಳೆ ಸುರಿದಿದೆ. ಜು.13 ರಂದು ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಜು.14 ಹಾಗೂ 15 ರಂದು ಭಾರಿ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.

ಯಲ್ಲಾಪುರ ತಾಲೂಕಿನಲ್ಲಿ ಕಳೆದ ಎರಡು ದಿವಸಗಳಿಂದ ಬಿಡುವು ನೀಡಿದ್ದ ಮಳೆ, ಶುಕ್ರವಾರ ಮತ್ತೆ ಚುರುಕುಗೊಂಡಿದೆ. ಬೆಳಗ್ಗೆಯಿಂದ ಬಿಟ್ಟು ಬಿಟ್ಟು ಜೋರಾಗಿ ಮಳೆ ಸುರಿಯುತ್ತಿದೆ. ಮಳೆ-ಗಾಳಿಯ ಪರಿಣಾಮ ಉಪಳೇಶ್ವರ-ನಂದೊಳ್ಳಿ ರಸ್ತೆಯಲ್ಲಿ ದಾನ್ಯಾನಕೊಪ್ಪದ ಬಳಿ ಮರವೊಂದು ಉರುಳಿ ಬಿದ್ದಿದೆ. ರಸ್ತೆಯಲ್ಲಿ ವಾಹನಗಳ ಸಂಚಾರ ಸ್ಥಗಿತಗೊಂಡಿದೆ.