ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಬಿರುಸಿನ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 20 ರಂದು ಎಲ್ಲ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.
ಹವಾಮಾನ ಇಲಾಖೆಯು ಶನಿವಾರ ಜಿಲ್ಲೆಯಲ್ಲಿ ರೆಡ್ ಅಲೆರ್ಟ್ ಘೋಷಿಸಿದೆ.