ಜಿಲ್ಲೆ

ಜ್ಞಾನಭಾರತಿ ಆವರಣದಲ್ಲಿ ಭಾರೀ ವಾಹನ ಸಂಚಾರ ನಿಷೇಧ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ಬಿಎಂಟಿಸಿ ಹೊರತುಪಡಿಸಿ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿ ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಜ್ಞಾನಭಾರತಿ ಆವರಣದಲ್ಲಿ ವಿವಿಧ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ಇಲ್ಲಿಗೆ ಗಣ್ಯ ವ್ಯಕ್ತಿಗಳು ಕೂಡ ಭೇಟಿ ನೀಡುತ್ತಿರುತ್ತಾರೆ. ಅಲ್ಲದೆ, ಇತ್ತೀಚಿನ ದಿನಗಳಲ್ಲಿ ವಾಃನ ಸಂಚಾರ ಅತ್ಯಧಿಕವಾಗಿದ್ದು, ಮೈಸೂರು ರಸ್ತೆಯಿಂದ ಉಲ್ಲಾಳು, ಮರಿಯಪ್ಪನಪಾಳ್ಯದಿಂದ ಮೈಸೂರು ರಸ್ತೆ ಕಡೆಗೆ ಸಾಗುವ ವಾಹನಗಳು, ಉಲ್ಲಾಳು ಕಡೆಯಿಂದ ನಾಗರಬಾವಿ ಮತ್ತು ಮೈಸೂರು ರಸ್ತೆ ಕಡೆಗೆಹೋಗುವ ಲಾರಿ, ಟಿಪ್ಪರ್, ಗೂಡ್ಸ್ ವಾಹನಗಳು, ಟೆಂಪೋ ಸೇರಿ ವಾಹನಗಳ ಸಂಖ್ಯೆ ಹೆಚ್ಚಳವಾಗಿದೆ.

ಇದರಿಂದಾಗಿ ವಿಶ್ವವಿದ್ಯಾಲಯ ಆವರಣದಲ್ಲಿ ಶೈಕ್ಷಣಿಕ ತರಗತಿಗಳಿಗೆ ತೊಂದರೆ ಉಂಟಾಗುತ್ತಿರುವುದರ ಜತೆಗೆ ರಸ್ತೆ ಅಪಘಾತಗಳು ಸಂಭವಿಸುತ್ತಿರುತ್ತವೆ. ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ರಕ್ಷಣೆ ಮತ್ತು ಸುಗಮ ಸಂಚಾರದ ಹಿತದೃಷ್ಟಿಯಿಂದ ಎಲ್ಲ ಮಾದರಿಯ ಸರಕು ಸಾಗಣೆ ವಾಹನಗಳ ಸಂಚಾರವನ್ನು ನಿಷೇಧಿಸುವ ಅವಶ್ಯಕತೆ ಇದೆ ಎಂದು ವಿಶ್ವವಿದ್ಯಾಲಯದ ಆಡಳಿತವು ಪ್ರಸ್ತಾವನೆ ಸಲ್ಲಿಸಿತ್ತು.

ಪ್ರಸ್ತಾವನೆಯಲ್ಲಿನ ಅಂಶಗಳನ್ನು ಅವಲೋಕಿಸಿ ಜ್ಞಾನಭಾರತಿ ಆವರಣದಲ್ಲಿ ಎಲ್ಲ ರೀತಿಯ ಸರಕು ಸಾಗಣೆ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಭಾರೀ ವಾಃನಗಳು ಪರ್ಯಾಯ ಮಾರ್ಗಗಳಾದ ಹೊರವರ್ತುಲ ರಸ್ತೆ, ನಾಗರಬಾವಿ ರಿಂಗ್ ರಸ್ತೆ ಮತ್ತು ಮೈರೂರು ರಸ್ತೆ ಮೂಲಕ ಸಂಚರಿಸುವಂತೆ ಸೂಚಿಸಲಾಗಿದೆ.

ಸಂಚಾರ ವ್ಯವಸ್ಥೆಯನ್ನು ಮಾರ್ಪಾಡು ಮಾಡಲು ಬೇಕಾದ ಅಗತ್ಯ ಸೂಚನಾ ಲಕಗಳನ್ನು ಸೂಕ್ತ ಸ್ಥಳಗಳಲ್ಲಿ ಅಳವಡಿಸಲು ಸ್ಥಳೀಯ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಅದೇಶ ನೀಡಿದ್ದಾರೆ.

 2022ರಲ್ಲಿ ಅಪಘಾತದಲ್ಲಿ ಮೃತಪಟ್ಟಿದ್ದ ವಿದ್ಯಾರ್ಥಿನಿ

ಎರಡು ವರ್ಷಗಳ 2022ರ ಅಕ್ಟೋಬರ್‌ನಲ್ಲಿ ಎಂಎಸ್ಸಿ ವಿದ್ಯಾರ್ಥಿನಿಯೊಬ್ಬರು ಬಿಎಂಟಿಸ್ ಹತ್ತುವ ವೇಳೆ ಕಾಲುಜಾರಿ ಬಿದ್ದು ಗಂಭೀರ ಗಾಯಗೊಂಡಿದ್ದರು. ನಂತರ ಆಸ್ಪತ್ರೆಯಲ್ಲಿ ಚಿಕಿತ್ಸೆ ಲಕಾರಿಯಾಗದೆ ಮೃತಪಟ್ಟಿದ್ದರು.

ಈ ಪ್ರಕರಣದಿಂದ ಎಚ್ಚೆತ್ತುಕೊಂಡಿದ್ದ ವಿಶ್ವವಿದ್ಯಾಲಯದ ಆಡಳಿತ ಮಂಡಳಿ, ಸ್ಥಳೀಯ ಸಂಸ್ಥೆಗಳಾದ ನಗರ ಪೊಲೀಸ್ ಇಲಾಖೆ, ಬಿಬಿಎಂಪಿ ಮತ್ತು ಬಿಡಿಎ ಜತೆ ಚರ್ಚಿಸಿ ಜ್ಞಾನಭಾರತಿ ಆವರಣದಲ್ಲಿ ಭಾರೀ ವಾಹನಗಳನ್ನು ನಿಷೇಧಿಸುವ ಬಗ್ಗೆ ಚರ್ಚಿಸಿತ್ತು. ಈಗ ಅಧಿಕೃತ ಆದೇಶ ಹೊರಬಿದ್ದಿದೆ.