ಜಿಲ್ಲೆ

ಭಾರಿ ಗಾಳಿಗೆ ಮಂಗಳಾದೇವಿ ಬಳಿ ಟ್ರಾನ್ಸ್‌ಫಾರ್ಮರ್‌ ಧರೆಗೆ

ಮಂಗಳೂರು: ನಗರದಲ್ಲಿ ಮಳೆಯ ಅಬ್ಬರ ಕಡಿಮೆಯಾದರೂ, ಅಗಾಗ್ಗೆ ಸುರಿಯುತ್ತಿರುವ ಮಳೆಯೊಂದಿಗೆ ಭಾರಿ ಗಾಳಿ ಬೀಸುತ್ತಿದೆ. ಬುಧವಾರ ಮಧ್ಯಾಹ್ನ ವೇಳೆಗೆ ಸುರಿದ ಮಳೆ-ಗಾಳಿ ಅಬ್ಬರಕ್ಕೆ ಮಂಗಳಾದೇವಿ ಬಳಿ ಟ್ರಾನ್ಸ್‌ಫಾರ್ಮರ್‌ ಒಂದು ತುಂಡಾಗಿ ರಸ್ತೆಗೆ ಬಿದ್ದಿದ್ದು, ಅಕ್ಕಪಕ್ಕದಲ್ಲಿದ್ದ 5 ವಿದ್ಯುತ್‌ ಕಂಬಗಳೂ ತುಂಡಾಗಿವೆ. ರಸ್ತೆಯಲ್ಲಿ ವಾಹನ ಸಂಚಾರ ಇಲ್ಲದಿದ್ದುದರಿಂದ ಯಾವುದೇ ಅಪಾಯ ಸಂಭವಿಸಿಲ್ಲ.
ಘಟನೆಯಿಂದ ಮಂಗಳಾದೇವಿ ವ್ಯಾಪ್ತಿಯಲ್ಲಿ ವಿದ್ಯುತ್‌ ವ್ಯತ್ಯಯವುಂಟಾಗಿದೆ. ಸ್ಥಳಕ್ಕೆ ಮೆಸ್ಕಾಂ ಸಿಬ್ಬಂದಿ ಧಾವಿಸಿ, ದುರಸ್ತಿ ಕಾರ್ಯದಲ್ಲಿ ತೊಡಗಿದ್ದಾರೆ. ಟ್ರಾನ್ಸ್‌ಫಾರ್ಮರ್‌ ಇದ್ದ ಜಾಗದಲ್ಲಿ ಮರಗಳೂ ಇದ್ದು, ರಸ್ತೆಯ ಇನ್ನೊಂದು ಬದಿಗೆ ಸ್ಥಳಾಂತರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.