ಗಂಗೊಳ್ಳಿ: ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭಾನುವಾರ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿ ದೇವರ ದರ್ಶನ ಪಡೆದರು.
ಆಡಳಿತ ಧರ್ಮದರ್ಶಿ ಎಚ್. ಬಾಲಚಂದ್ರ ಭಟ್ ಸಚಿವರನ್ನು ಗೌರವಿಸಿದರು. ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಜಿಪಂ ಸಿಇಒ ಪ್ರತೀಕ್ ಬಾಯಲ್, ಕುಂದಾಪುರ ಉಪವಿಭಾಗ ಸಹಾಯಕ ಆಯುಕ್ತೆ ರಶ್ಮಿ ಎಸ್.ಆರ್., ಕುಂದಾಪುರ ತಹಸೀಲ್ದಾರ್ ಶೋಭಾಲಕ್ಷ್ಮೀ, ತಾಪಂ ಇಒ ಶಶಿಧರ್ ಇದ್ದರು.