ಜಿಲ್ಲೆ

ಪ್ರತಿಭೆ ಅನಾವರಣ ಮಾಡಲು ಸಹಕಾರಿ

ಆದರ್ಶ್. ಎಂ.ಕೆ.

ಮಡಿಕೇರಿ: ಮಕ್ಕಳಸಂತೆಯಂತಹ ಕಾರ್ಯಕ್ರಮದಲ್ಲಿ ಮಕ್ಕಳ ಪ್ರತಿಭೆ ಅನಾವರಣ ಮಾಡಲು ಸಹಕಾರಿ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಹೇಳಿದರು.

ಮಡಿಕೇರಿ ನಗರ ದಸರಾ ಸಮಿತಿ, ದಸರಾ ಜನೋತ್ಸವ ಸಾಂಸ್ಕೃತಿಕ ಸಮಿತಿ ವತಿಯಿಂದ ರೋಟರಿ ಮಿಸ್ಟಿ ಹಿಲ್ಸ್ ಸಹಯೋಗದಲ್ಲಿ ಶನಿವಾರ ಮಕ್ಕಳದಸರಾದ ಸಭಾಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.


ಮಕ್ಕಳ ವ್ಯಾಪಾರ ವಹಿವಾಟಿನ ಬಗ್ಗೆ ತಿಳಿದುಕೊಳ್ಳಲು ಮಕ್ಕಳ ಸಂತೆ ಸಹಕಾರಿಯಾಗಿದೆ. ಆ ನಿಟ್ಟಿನಲ್ಲಿ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿರುವುದು ವಿಶೇಷವಾಗಿದೆ. ಮಡಿಕೇರಿ ದಸರಾ ಅಂತರ್ಜಾಲ ಮೂಲಕ ಎಲ್ಲೆಡೆ ಫಸರಿಸುವಂತಾಗಬೇಕು. ಆ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯಲಿ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದರು.


ದಕ್ಷಿಣ ವಲಯದ ಡಿಐಜಿಪಿ ಡಾ.ಬೋರಲಿಂಗಯ್ಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಪೌರಾಯುಕ್ತರಾದ ಎಚ್.ಆರ್.ರಮೇಶ್, ಮಡಿಕೇರಿ ನಗರ ದಸರಾ ಸಮಿತಿ ಕಾರ್ಯಾಧ್ಯಕ್ಷ ಪ್ರಕಾಶ್ ಆಚಾರ್ಯ, ಪ್ರಧಾನ ಕಾರ್ಯದರ್ಶಿ ರಾಜೇಶ್ ಯಲ್ಲಪ್ಪ, ಖಜಾಂಜಿ ಅರುಣ್ ಶೆಟ್ಟಿ, ದಸರಾ ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಅನಿಲ್.ಎಚ್.ಟಿ, ನಗರಸಭೆ ಮಾಜಿ ಅಧ್ಯಕ್ಷ ಅನಿತಾ ಪೂವಯ್ಯ, ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷರಾದ ಪೊನ್ನಚ್ಚನ ಮಧುಸೂದನ್, ರೋಟರಿ ಮಿಸ್ಟಿ ಹಿಲ್ಸ್‌ನ ಕಿರಣ್, ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ಕಾರ್ಯದರ್ಶಿ ಕಟ್ಟೆಮನೆ ಸೋನಜಿತ್ ಇತರರು ಮಕ್ಕಳ ಸಂತೆ ವೀಕ್ಷಿಸಿದರು.