ಜಿಲ್ಲೆ

ಸಹಾಯವಾಣಿ ಕೇಂದ್ರ ಸ್ಥಾಪನೆ

Dharwada - Vikram Nadiger

ವಿಜಯವಾಣಿ ಸುದ್ದಿಜಾಲ ಧಾರವಾಡ

ರಾಜ್ಯದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರದಿಂದ ಜಾತಿ, ಆದಾಯ ಪ್ರಮಾಣ ಪಡೆಯಲು ವಿಳಂಬವಾಗುತ್ತಿರುವುದು ಗಮನಕ್ಕೆ ಬಂದಿದೆ. ಹೀಗಾಗಿ ವಿದ್ಯಾರ್ಥಿಗಳ ಪರೀಕ್ಷೆ ಹಾಗೂ ನೇಮಕಾತಿ ಉದ್ದೇಶಕ್ಕೆ ತ್ವರಿತವಾಗಿ ಸ್ಪಂದಿಸಲು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಹಾಯವಾಣಿ ಸ್ಥಾಪಿಸಲಾಗಿದೆ.

ಜಾತಿ, ಆದಾಯ ಪ್ರಮಾಣ ಪತ್ರ ಪಡೆಯುವಲ್ಲಿ ತೊಂದರೆ ಉಂಟಾದಲ್ಲಿ ಜಿಲ್ಲಾ ಎಜೆಎಸ್​ ಸಂಯೋಜಕರಿಗೆ ಹಾಗೂ ಸಹಾಯವಾಣಿ (0836-2233880) ಸಂಖ್ಯೆಗೆ ಕರೆ ಮಾಡಿದಲ್ಲಿ ಕೂಡಲೇ ಸ್ಪಂದಿಸಿ ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ತಿಳಿಸಿದ್ದಾರೆ.