ಬನ್ನೂರಿನಲ್ಲಿ ಆಯೋಜಿಸಿದ್ದ ಕಣ್ಣಿನ ಉಚಿತ ತಪಾಸಣಾ ಶಿಬಿರದಲ್ಲಿ ಡಾ.ಮಹೇಂದ್ರಸಿಂಗ್‌ಕಾಳಪ್ಪ, ಕೆ.ರಾಜೇಶ್‌ಕುಮಾರ್, ನಾಡಗೌಡ ಪಾರ್ಥಸಾರಥಿ, ಭದ್ರಿಸಿಂಗ್‌ರೂಪಾವಾಸ್, ಡಾ.ಸ್ನೇಹಲತಾ, ಡಾ.ಗಾಥೀಅಂಜಲಿ ಇತರರು ಇದ್ದರು. 
ಜಿಲ್ಲೆ

ಅಂಧತ್ವ ನಿವಾರಣೆಗಾಗಿ ಶಿಬಿರ ಆಯೋಜನೆ

ನಾಗೇಶ ಎಸ್

ಬನ್ನೂರು: ದೃಷ್ಟಿಹೀನರಿಗಾಗಿ ಆಯೋಜಿಸಿರುವ ಕಣ್ಣಿನ ಉಚಿತ ತಪಾಸಣೆ ಶಿಬಿರವನ್ನು ಸದ್ಬಳಕೆ ಮಾಡಿಕೊಂಡು, ಉತ್ತಮ ಜೀವನ ನಡೆಸುವಂತೆ ರೋಟರಿ ಮಾಜಿ ಅಧ್ಯಕ್ಷ ಡಾ.ಮಹೇಂದ್ರಸಿಂಗ್‌ಕಾಳಪ್ಪ ತಿಳಿಸಿದರು.

ಪಟ್ಟಣದ ರೋಟರಿ ಸಂಸ್ಥೆ, ಕಾನ್‌ಸಿಂಗ್‌ಜೀ ರಾಜ್‌ಪುರೋಹಿತ್, ಶ್ರೀ ಗೌರಿದೇವಿ , ಲಯನ್ಸ್ ಕ್ಲಬ್ ಆಫ್ ಈರೋಡ್ ಕಾವೇರಿ ಟ್ರಸ್ಟ್, ಕೊಯಮತ್ತೂರು ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಶನಿವಾರ ನಡೆದ ಕಣ್ಣಿನ ಉಚಿತ ತಪಾಸಣಾ ಶಿಬಿರದಲ್ಲಿ ಮಾತನಾಡಿದರು.

ಸಮಾಜದಲ್ಲಿ ದೃಷ್ಟಿಹೀನರ ಸಂಖ್ಯೆ ಅದರಲ್ಲೂ ಗ್ರಾಮೀಣ ಪ್ರದೇಶದಲ್ಲಿರುವಂತ ದೃಷ್ಟಿ ಹೀನರ ಸಂಖ್ಯೆ ಅಧಿಕವಾಗಿದ್ದು, ಅವರಿಗೆ ಅನುಕೂಲವಾಗಬೇಕು ಎನ್ನುವ ಮಹತ್ವಾಕಾಂಕ್ಷೆಯಿಂದ ಈ ಸೇವಾ ಕಾರ್ಯವನ್ನು ನಿರಂತರವಾಗಿ ಮಾಡುತ್ತಾ ಬರುತ್ತಿದ್ದು, ಉತ್ತಮ ಪ್ರತಿಕ್ರಿಯೆ ದೊರೆತಿದೆ ಎಂದು ಹೇಳಿದರು.

ಕಣ್ಣಿನ ಪೊರೆ, ಗ್ಲಾಕೋಮಾ, ನೀರು ಸೋರುವಿಕೆ, ಕಣ್ಣಿನಲ್ಲಿ ಗೀಜು ಬರುವುದು, ಹತ್ತಿರ ಮತ್ತು ದೂರದೃಷಿ ದೋಷ, ಕಣ್ಣಿನಲ್ಲಿ ಬಿರುಕು ಉಂಟಾಗುವುದು, ವಾರೆ ಕಣ್ಣು, ರಾತ್ರಿ ಕುರುಡುತನಕ್ಕೆ ಇಲ್ಲಿ ಚಿಕಿತ್ಸೆ ನೀಡಲಾಗುವುದು. ಕಣ್ಣಿನ ಪೊರೆ ಇರುವವರನ್ನು ಆಯ್ಕೆ ಮಾಡಿ, ಕೊಯಮತ್ತೂರು ಕಣ್ಣಿನ ಆಸ್ಪತ್ರೆಗೆ ಉಚಿತವಾಗಿ ಕರೆದುಕೊಂಡು ಹೋಗಿ, ಶಸ್ತ್ರಚಿಕಿತ್ಸೆ ಮಾಡಿಸಲಾಗುವುದು ಎಂದು ತಿಳಿಸಿದರು.

ವಿವಿಧ ಗ್ರಾಮಗಳಿಂದ ಸುಮಾರು 200ಕ್ಕೂ ಹೆಚ್ಚು ಶಿಬಿರಾರ್ಥಿಗಳು ಆಗಮಿಸಿ ಕಣ್ಣಿನ ತಪಾಸಣೆಗೆ ಮಾಡಿಸಿಕೊಂಡರು. ಕೆಲವರು ಪೊರೆ ಶಸ್ತ್ರಚಿಕಿತ್ಸೆಗೆ ಆಯ್ಕೆಯಾದರು.

ಕೆ.ರಾಜೇಶ್‌ಕುಮಾರ್, ನಾಡಗೌಡ ಪಾರ್ಥಸಾರಥಿ, ಭದ್ರಿಸಿಂಗ್‌ರೂಪಾವಾಸ್, ಡಾ.ಸ್ನೇಹಲತಾ, ಡಾ.ಗಾಥೀಅಂಜಲಿ, ವಿಜಯ್‌ಕುಮಾರ್, ಸಂತೋಷ್‌ಕುಮಾರಿ, ವನ್ಯ, ವಿರಾಟ್, ಮೂರ್ತಿ, ಯಾಸೀನ್ ಉಪಸ್ಥಿತರಿಸಿದ್ದರು.