ಹಾಸನ ಹಾಲು ಒಕ್ಕೂಟದ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾದ ಕೆ.ಕೆ.ಹೇಮಂತಕುಮಾರ್ ಅವರಿಗೆ ಚುನಾವಣಾಧಿಕಾರಿ ಪ್ರಮಾಣ ಪತ್ರ ನೀಡಿದರು. ಎಚ್.ಡಿ.ರೇವಣ್ಣ ಇತರರು ಇದ್ದರು. 
ಜಿಲ್ಲೆ

ಹಾಸನ ಹಾಲು ಒಕ್ಕೂಟದ ನಿರ್ದೇಶಕರಾಗಿ ಹೇಮಂತ್‌ಕುಮಾರ್ ಆಯ್ಕೆ

ಕುಶಾಲನಗರ: ಹಾಸನ ಹಾಲು ಒಕ್ಕೂಟದ ಆಡಳಿತ ಮಂಡಳಿಯ ನಿರ್ದೇಶಕರಾಗಿ ಕೆ.ಕೆ.ಹೇಮಂತ್‌ಕುಮಾರ್ ಎರಡನೇ ಬಾರಿಗೆ ಅವಿರೋಧವಾಗಿ ಶುಕ್ರವಾರ ಆಯ್ಕೆಯಾಗಿದ್ದಾರೆ.

ಒಕ್ಕೂಟದ ಆಡಳಿತ ಮಂಡಳಿಯ ಚುನಾವಣಾ ಪ್ರಕ್ರಿಯೆಯಲ್ಲಿ ಕೊಡಗು ಜಿಲ್ಲೆಯಿಂದ ಒಂದೇ ನಾಮ ಪತ್ರ ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಕೆ.ಕೆ ಹೇಮಂತ್‌ಕುಮಾರ್ ಅವಿರೋಧವಾಗಿ ಅಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಘೋಷಣೆ ಮಾಡಿದರು. ಹಾಸನ ಹಾಲು ಒಕ್ಕೂಟದ ಅಧ್ಯಕ್ಷ ಹೆಚ್.ಡಿ.ರೇವಣ್ಣ ಸೇರಿದಂತೆ ನೂತನವಾಗಿ ಆಯ್ಕೆಯಾದ ಆಡಳಿತ ಮಂಡಳಿಯ ನಿರ್ದೇಶಕರು ಹಾಜರಿದ್ದರು.