ಮಂಗಳೂರು: ಜಿಲ್ಲಾಡಳಿತ,ಜಿಲ್ಲಾ ಪಂಚಾಯತಿ,ಮಂಗಳೂರು ತಾಲೂಕು ಪಂಚಾಯತಿ,ರಾಜ್ಯ ಗ್ರಾಮೀಣ ಜಿವನೋಪಾಯ ಸಂವರ್ಧನ ಸಂಸ್ಥೆ ಹಾಗೂ ಸ್ವಚ್ಚ ಭಾರತ್ ಮಿಷನ್ ವತಿಯಿಂದ ಅಜಾದಿ ಕಾ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಹರ್ ಘರ್ ತಿರಂಗ ಅಭಿಯಾನಕ್ಕೆ ಶನಿವಾರ .6ರ ಶನಿವಾರ ಕೆ.ಎಸ್.ಆರ್.ಟಿ.ಸಿ ಬನಿಲ್ದಾಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಚಾಲನೆ ನೀಡಿದರು.
ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಮೇಯರ್ ಪ್ರೇಮಾನಂದ ಶೆಟ್ಟಿ,
ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್,ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಕೆ.ಎಸ್.ಆರ್.ಟಿ.ಸಿ. ವಿಭಾಗಿಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ, ತೋಟಗಾರಿಕಾ ಇಲಾಖೆ ಉಪ ನಿರ್ದೇಶಕ ಎಚ್.ಆರ್. ನಾಯಕ್ ಹಾಗೂ ಇತರೆ ಅಧಿಕಾರಿಗಳು, ಕೆ.ಎಸ್.ಆರ್.ಟಿ.ಸಿ. ಚಾಲಕರು, ನಿರ್ವಾಹಕರು, ಸಿಬ್ಬಂದಿಗಳು, ಪ್ರಯಾಣಿಕರಿದ್ದರು.