ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರ ಇಲಾಖೆಯ ವತಿಯಿಂದ ಪ್ರತಿ ತಿಂಗಳ ಮೊದಲನೇ ಶನಿವಾರದಂದು ವಿದ್ಯಾರ್ಥಿಗಳಿಗೆ ಪಾರಂಪರಿಕ ನಡಿಗೆ ಕಾರ್ಯಕ್ರಮ ಆಯೋಜಿಸಲಾಗಿದೆ.
ಆಸಕ್ತರು ಹಾಗೂ ಸಾರ್ವಜನಿಕರಿಗೆ ನಡಿಗೆ ಮೂಲಕ ಪಾರಂಪರಿಕ ಕಟ್ಟಡಗಳ ಮಹತ್ವ, ಐತಿಹಾಸಿಕ ಹಿನ್ನೆಲೆ ಹಾಗೂ ವಾಸ್ತುಶಿಲ್ಪಗಳ ಕುರಿತು ಜಾಗೃತಿ ಮೂಡಿಸುವ ಸಂಬoಧ ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಇದಕ್ಕೆ ಯಾವುದೇ ಶುಲ್ಕ ಇರುವುದಿಲ್ಲ.
ಕಾರ್ಯಕ್ರಮವು ಬೆಳಗ್ಗೆ 6:30 ರಿಂದ ಪ್ರಾರಂಭವಾಗಲಿದ್ದು, ಆಸಕ್ತರು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿರುವ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಉಪ ನಿರ್ದೇಶಕರ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದು ಎಂದು ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.