ಜಿಲ್ಲೆ

ಧರ್ಮಪುರದಲ್ಲಿ ಕರೊನಾ ಜಾಗೃತಿ ಜಾಥಾ

Chitradurga

ಹಿರಿಯೂರು: ಜನತೆ ಅನಗತ್ಯ ಓಡಾಟಕ್ಕೆ ಕಡಿವಾಣ ಹಾಕಿ, ಸರ್ಕಾರದ ನಿಯಮ ಪಾಲಿಸಿದಾಗ ಮಾತ್ರ ಕರೊನಾ ಸೋಂಕಿನಿಂದ ಪಾರಾಗಲು ಸಾಧ್ಯ ಎಂದು ಸಿಪಿಐ ರಾಘವೇಂದ್ರ ಹೇಳಿದರು.

ತಾಲೂಕಿನ ಧರ್ಮಪುರದಲ್ಲಿ ಮಂಗಳವಾರ ಕರೊನಾ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.

ಜನರ ಸುರಕ್ಷತೆಗೆ ಪೊಲೀಸ್ ಸಿಬ್ಬಂದಿ ಹಗಲಿರುಳು ಶ್ರಮಿಸುತ್ತಿದ್ದು, ಸಮಾಜದಲ್ಲಿ ಶಾಂತಿ-ಕಾನೂನು ಸುವ್ಯವಸ್ಥೆ ಕಾಪಾಡಲು ಹಾಗೂ ಕರೊನಾ ಮಹಾಮಾರಿ ವಿರುದ್ಧದ ಹೋರಾಟದಲ್ಲಿ ಯಶಸ್ಸು ಸಾಧಿಸಲು ಜನರ ಸಹಕಾರ ಅಗತ್ಯ. ಪ್ರತಿಯೊಬ್ಬರೂ ಸರ್ಕಾರದ ಆದೇಶ ಪಾಲಿಸಿ ಆರೋಗ್ಯಯುತ ದೇಶ ನಿರ್ಮಾಣಕ್ಕೆ ಸಹಕರಿಸಬೇಕೆಂದು ಕೋರಿದರು.

ಧರ್ಮಪುರದ ಉಪ ಪೊಲೀಸ್ ಠಾಣೆ ಆವರಣದಿಂದ ಸೈಕಲ್ ಜಾಥಾ ಆರಂಭಿಸಿದ ಪೊಲೀಸರು, ಗ್ರಾಮದೆಲ್ಲೆಡೆ ಸಂಚರಿಸಿ ಕರೊನಾ ಸೋಂಕಿನ ಬಗ್ಗೆ ಜಾಗೃತಿ ಮೂಡಿಸಿದರು.

ಡಾ.ವಿಜಯ್, ಅಬ್ಬಿನಹೊಳೆ ಪೊಲೀಸ್ ಠಾಣೆ ಪಿಎಸ್‌ಐ ಚಂದ್ರಶೇಖರ್, ಕಂದಾಯ ನಿರೀಕ್ಷಕ ನಾಗರಾಜ್, ಪಿಡಿಒ ಚಿಕ್ಕಣ್ಣ, ಬಿಜೆಪಿ ಮುಖಂಡ ನಾಗರಾಜ್‌ರಾವ್, ಗ್ರಾಪಂ.ಮಾಜಿ ಅಧ್ಯಕ್ಷ ಎಂ.ಶಿವಣ್ಣ, ರವಿಶಂಕರ್, ಗ್ರಾಮ ಲೆಕ್ಕಾಧಿಕಾರಿ ವರದರಾಜ್, ರಾಘವೇಂದ್ರ ಇತರರಿದ್ದರು.