ಧಾರವಾಡ: ಹೆಸ್ಕಾಂನಲ್ಲಿ ಗುತ್ತಿಗೆ ನೌಕರನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ನಗರ ಹೊರವಲಯದ ಹಳಿಯಾಳ ರಸ್ತೆಯಲ್ಲಿ ಶುಕ್ರವಾರ ಸಂಜೆ ನಡೆದಿದೆ. ತಾಲೂಕಿನ ಬಾಡ ಗ್ರಾಮದ ರಜಾಕ್ ಕವಲಗೇರಿ (48) ಹತ್ಯೆಯಾದ ವ್ಯಕ್ತಿ.
ಈತ ಕೆಲಸ ಮುಗಿಸಿ ಬೈಕ್‌ನಲ್ಲಿ ಮರಳುತ್ತಿದ್ದ ವೇಳೆ ಕೆಲವರು ಅಡ್ಡಗಟ್ಟಿ ಕೊಚ್ಚಿ ಕೊಲೆ ಮಾಡಿದ್ದಾರೆ. ಉಪನಗರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಮಾಹಿತಿ ಕಲೆ ಹಾಕುತ್ತಿದ್ದಾರೆ. ಹಳೇ ದ್ವೇಷ ಕೊಲೆಗೆ ಕಾರಣ ಎಂದು ತಿಳಿದುಬಂದಿದೆ.