ಜಿಲ್ಲೆ

ಹೆಸ್ಕಾಂ ಎಂಡಿಯಾಗಿ ವೈಶಾಲಿ ಅಧಿಕಾರ ಸ್ವೀಕಾರ

Dharwada - Basavaraj Idli

ಹುಬ್ಬಳ್ಳಿ: ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದ (ಹೆಸ್ಕಾಂ) ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಐಎಎಸ್ ಅಧಿಕಾರಿ ವೈಶಾಲಿ ಎಂ.ಎಲ್. ಅವರು ಗುರುವಾರ ಅಧಿಕಾರ ವಹಿಸಿಕೊಂಡರು.

ಈ ಹಿಂದಿನ ಎಂಡಿಯಾಗಿದ್ದ ಮೊಹಮ್ಮದ್ ರೋಷನ್ ಅವರು ಬೆಳಗಾವಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ. ಇದಕ್ಕೂ ಮೊದಲು ವೈಶಾಲಿ ಎಂ.ಎಲ್. ಅವರು ಗದಗ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ.