ಬೆಳಗಾವಿ: ಇತ್ತೀಚೆಗೆ ಬಿಜೆಪಿ ಹೈಕಮಾಂಡ್ ಇಬ್ಬರು ನಿಷ್ಠಾವಂತ ಕಾರ್ಯಕರ್ತರಿಗೆ ರಾಜ್ಯಸಭೆ ಟಿಕೆಟ್ ನೀಡಿರುವ ನಿರ್ಧಾರವನ್ನು ಸ್ವಾಗತಿಸುವುದಾಗಿ ರಾಜ್ಯಸಭಾ ಸದಸ್ಯ ಹಾಗೂ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಹೇಳಿದ್ದಾರೆ. ಈ ಕುರಿತು ಮಂಗಳವಾರ ವಿಜಯವಾಣಿಯೊಂದಿಗೆ ಮಾತನಾಡಿದ ಅವರು, ಈ ಬಾರಿ ರಾಜ್ಯಸಭಾ ಟಿಕೆಟ್‌ನ್ನು ಪಕ್ಷದ ಕಾರ್ಯಕರ್ತರಿಗೆ ನೀಡಿರುವುದು ಪಕ್ಷದ ಬಲವರ್ಧನೆಗೆ ಸಹಕಾರಿಯಾಗಲಿದೆ ಎಂದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ಸುರೇಶ ಅಂಗಡಿ, ಸಚಿವ ಜಗದೀಶ ಶೆಟ್ಟರ್ ಸೇರಿ ಎಲ್ಲರೂ ಈ ಬಾರಿಯೂ
ನನ್ನ ಹೆಸರನ್ನು ಕೋರ್ ಕಮಿಟಿಯಲ್ಲಿ ಶಿಾರಸು ಮಾಡಿ, ಹೈಕಮಾಂಡ್‌ಗೆ ಕಳುಹಿಸುವ ಮೂಲಕ ಬೆಂಬಲ ನೀಡಿದ್ದಕ್ಕೆ ನಾನು ಚಿರಋಣಿಯಾಗಿದ್ದೇನೆ ಎಂದು ಡಾ.ಕೋರೆ ತಿಳಿಸಿದ್ದಾರೆ.