ಜಿಲ್ಲೆ

ಲಾಕ್​ಡೌನ್​ನಿಂದಾಗಿ ನಿರಾಶ್ರಿತರಾದವರ ಕುರಿತು ಬಿಬಿಎಂಪಿ ಕೊಟ್ಟ ಮಾಹಿತಿಗೆ ಹೈಕೋರ್ಟ್​ ಅಸಮಾಧಾನ

Mysuru Rural

ಬೆಂಗಳೂರು: ಲಾಕ್​ಡೌನ್​ನಿಂದಾಗಿ ನಗರದಲ್ಲಿ ವಾಸ್ತವವಾಗಿ ಎಷ್ಟು ವಲಸೆ ಕಾರ್ವಿುಕರು, ಕೂಲಿ ಕಾರ್ವಿುಕರು ಆಶ್ರಯವಿಲ್ಲದೆ ರಸ್ತೆ ಹಾಗೂ ಸರ್ಕಾರಿ ಜಾಗಗಳಲ್ಲಿ ಉಳಿದುಕೊಂಡಿದ್ದಾರೆ ಎಂಬುದನ್ನು ಬಿಬಿಎಂಪಿ ಸೂಕ್ತವಾಗಿ ಪರಿಶೀಲನೆ ನಡೆಸಿಲ್ಲ ಎಂದು ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ಕರೊನಾ ಸೋಂಕು ಹರಡುವಿಕೆ ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಸಿಜೆ ನೇತೃತ್ವದ ವಿಭಾಗೀಯ ಪೀಠ ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೊಂಡಿತು.

ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗಳು ಕೂಡಲೇ ಮಧ್ಯಪ್ರವೇಶಿಸಿ ನಗರದಲ್ಲಿರುವ ನಿರಾಶ್ರಿತರು, ವಲಸೆ ಕಾರ್ವಿುಕರು, ಕೂಲಿ ಕಾರ್ವಿುಕರಿಗೆ ಮತ್ತು ನಿರ್ಗತಿಕರಿಗೆ ಆಶ್ರಯ ಕಲ್ಪಿಸುವ ಸಂಬಂಧ ಬಿಬಿಎಂಪಿಗೆ ನಿರ್ದೇಶಿಸಬೇಕು ಎಂದು ಸೂಚಿಸಿತು. ಮೆಜೆಸ್ಟಿಕ್ ಸುತ್ತಲಿನ ಪ್ರದೇಶದಲ್ಲಿ ಕೇವಲ 100 ನಿರಾಶ್ರೀತರು ಹಾಗೂ ವಲಸಿಗರು ಇದ್ದಾರೆ ಎಂದು ಬಿಬಿಎಂಪಿ ಸಲ್ಲಿಸಿದ್ದ ವರದಿಗೆ ನ್ಯಾಯಪೀಠ ಬೇಸರ ವ್ಯಕ್ತಪಡಿಸಿತು.