ಜಿಲ್ಲೆ

ಮುನಿರತ್ನಗೆ ‘ಹೈ’ ನೋಟಿಸ್

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾಸಭಾ ಕ್ಷೇತ್ರ ವ್ಯಾಪ್ತಿಯ ಅಪಾರ್ಟ್​ವೆುಂಟ್ ಒಂದರಲ್ಲಿ ಸಾವಿರಾರು ಮತದಾರರ ಗುರುತಿನ ಚೀಟಿ ಪತ್ತೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ಮಾಜಿ ಶಾಸಕ ಮುನಿರತ್ನಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಬೆಂಗಳೂರಿನ ಆನಂದ್ ಕುಮಾರ್ ಹಾಗೂ ಸಂತೋಷ್ ಕುಮಾರ್ ಸಲ್ಲಿಸಿರುವ ಅರ್ಜಿಯನ್ನು ಮಂಗಳವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠ, ಅರ್ಜಿಯಲ್ಲಿ 5ನೇ ಪ್ರತಿವಾದಿಯಾಗಿರುವ ಮುನಿರತ್ನ ಅವರಿಗೆ ನೋಟಿಸ್ ಜಾರಿಗೊಳಿಸಿ, ನ.11ರೊಳಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿತು.