filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 2;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 39; 
ಜಿಲ್ಲೆ

ನಂಜನಗೂಡಿನಲ್ಲಿ ಹೆದ್ದಾರಿ ಸಂಚಾರ ತಡೆ

ಮಾದೇಶ್ ತಿ.ನರಸೀಪುರ

ನಂಜನಗೂಡು: ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಅಮಿತ್ ಷಾ ಅವರನ್ನು ಕೇಂದ್ರ ಸಚಿವ ಸಂಪುಟದಿಂದ ವಜಾಗೊಳಿಸಿ, ದೇಶದಿಂದಲೇ ಗಡಿಪಾರು ಮಾಡುವಂತೆ ಆಗ್ರಹಿಸಿ ನಂಜನಗೂಡು ದಲಿತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ನಡೆಸಲಾಯಿತು.

ಪಟ್ಟಣದ ಹುಲ್ಲಹಳ್ಳಿ ವೃತ್ತದ ಬಳಿ ಶನಿವಾರ ಜಮಾವಣೆಗೊಂಡ ದಲಿತ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು, ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿ ಸಂಚಾರವನ್ನು ತಡೆದು, ಮಾನವ ಸರಪಳಿ ನಿರ್ಮಿಸಿ, ಅಮಿತ್ ಷಾ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಒಂದು ಗಂಟೆಗಳಿಗೂ ಹೆಚ್ಚು ಕಾಲ ರಾಷ್ಟ್ರೀಯ ಹೆದ್ದಾರಿ ಸಂಚಾರವನ್ನು ತಡೆದ ಪರಿಣಾಮ ಸಂಚಾರ ಅಸ್ತವ್ಯಸ್ತಗೊಂಡು ಸಾರ್ವಜನಿಕರು ಪರದಾಡುವಂತಾಯಿತು. ವಿವಿಧ ಸಂಘಟನೆಗಳ ಮುಖಂಡರಾದ ನಗರ್ಲೆ ಎಂ ವಿಜಯಕುಮಾರ್, ವಿದ್ಯಾಸಾಗರ್, ಬೊಕ್ಕಳ್ಳಿ ನಂಜುಂಡಸ್ವಾಮಿ, ಅಭಿ ನಾಗಭೂಷಣ್, ಮಲ್ಲೇಶ್, ನಾರಾಯಣ್, ಕಾರ್ಯ ಬಸವಣ್ಣ, ಜಯಶಂಕರ್, ಕುಮಾರ್ ಇತರರು ಇದ್ದರು.