ಉಡುಪಿ: ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿ ಹೈಕೋರ್ಟ್ ಮೆಟ್ಟಿಲೇರಿದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸಹೋದರನಿಗೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ.
ಸೋಮವಾರ ರಾತ್ರಿ ವಿದ್ಯಾರ್ಥಿನಿಯ ತಂದೆಗೆ ಸೇರಿದ ಮಲ್ಪೆಯ ಬಿಸ್ಮಿಲ್ಲಾ ಹೋಟೆಲಿಗೆ ಹತ್ತಾರು ಮಂದಿ ಯುವಕರು ಕಲ್ಲು ತೂರಾಟ ನಡೆಸಿದ್ದು, ಹೋಟೆಲ್ ನಲ್ಲಿದ್ದ ಸಹೋದರ ಸೈಫ್ (20) ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆಗೆ ಒಳಗಾಗಿರುವ ಸೈಫ್ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.