ಗೋಳಿಯಂಗಡಿ: ಸರ್ಕಾರಿ ಶಾಲೆಗಳಲ್ಲೂ ಆಂಗ್ಲ ಮಾಧ್ಯಮ ಶಿಕ್ಷಣ ಆರಂಭವಾಗುತ್ತಿದೆ. ಗುಣಮಟ್ಟದ ಶಿಕ್ಷಣದಿಂದ ಸರ್ಕಾರಿ ಶಾಲೆ ಅಭಿವೃದ್ಧಿ ಸಾಧ್ಯ ಎಂದು ಶಾಸಕ ಎ.ಕಿರಣ್‌ಕುಮಾರ್ ಕೊಡ್ಗಿ ಹೇಳಿದರು.
ಹಿಲಿಯಾಣ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ಅಮೃತ ಮಹೋತ್ಸವದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎ.ಕರುಣಾಕರ ಹೆಗ್ಡೆ ಆನಗಳ್ಳಿ ಉದ್ಘಾಟಿಸಿದರು. ನಿವೃತ್ತ ಪ್ರಾಂಶುಪಾಲ ಎಚ್.ಬಾಲಕೃಷ್ಣ ಶೆಟ್ಟಿ ಆಂಗ್ಲ ಮಾಧ್ಯಮ ಶಿಕ್ಷಣ ಟ್ರಸ್ಟ್ ಅನಾವರಣಗೊಳಿಸಿದರು. ಆವರ್ಸೆ ಗ್ರಾಪಂ ಅಧ್ಯಕ್ಷ ಲಕ್ಷ್ಮಣ ಪೂಜಾರಿ ಧ್ವಜಾರೋಹಣ ನೆರವೇರಿಸಿದರು.
ಸಂಸದ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಚಿವ ಕೆ.ಜಯಪ್ರಕಾಶ್ ಹೆಗ್ಡೆ, ಬ್ರಹ್ಮಾವರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಶಬಾನಾ ಅಂಜುಮ್, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ನಿತ್ಯಾನಂದ ಶೆಟ್ಟಿ, ಆವರ್ಸೆ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಪ್ರತಿಭಾ, ಎಸ್‌ಡಿಎಂಸಿ ಅಧ್ಯಕ್ಷ ರಾಘವೇಂದ್ರ ನಾಯ್ಕ, ಪ್ರಮುಖರಾದ ಎಚ್.ಚಿತ್ತರಂಜನ್‌ದಾಸ್ ಶೆಟ್ಟಿ, ಎಚ್.ಪ್ರಮೋದ್ ಹೆಗ್ಡೆ, ಉಷಾ ಸಿದ್ದಾರ್ಥ ನಾಯ್ಕ, ವೈ.ನಾಗರಾಜ ವೈದ್ಯ, ಎಚ್.ತಾರಾನಾಥ ಶೆಟ್ಟಿ, ವಿನಯ ಕುಮಾರ್ ಶೆಟ್ಟಿ, ಭಾರತಿ ಯು.ಶೆಟ್ಟಿ, ಆನಂದ ಶೆಟ್ಟಿ, ಉದಯ ಕುಮಾರ್ ಶೆಟ್ಟಿ, ಸಂತೋಷ ಕುಮಾರ್ ಶೆಟ್ಟಿ, ಕೃಷ್ಣಮೂರ್ತಿ ಶೆಟ್ಟಿ, ಎಸ್‌ಡಿಎಂಸಿ ಅಧ್ಯಕ್ಷ ರಾಘವೇಂದ್ರ ನಾಯ್ಕ, ಸುಧಾಕರ ಶೆಟ್ಟಿ ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕಿ ವಿಜಯಲಕ್ಷ್ಮೀ ಸ್ವಾಗತಿಸಿದರು. ಪ್ರಕಾಶ ಶೆಟ್ಟಿ ಶುಭ ಸಂದೇಶ, ತೀರ್ಥ ಸನ್ಮಾನಪತ್ರ, ಪದ್ಮಶ್ರೀ ಬಹುಮಾನ ಪಟ್ಟಿ ವಾಚಿಸಿದರು. ಶಶಿಧರ ಶೆಟ್ಟಿ ನಂಚಾರು, ಮಂಜುನಾಥ ಹಿಲಿಯಾಣ ಕಾರ್ಯಕ್ರಮ ನಿರೂಪಿಸಿದರು. ಮಲ್ಲಿಕಾ ವಂದಿಸಿದರು.
ನಿವೃತ್ತ ಮುಖ್ಯ ಶಿಕ್ಷಕರಾದ ಶೇಖರ ಶೆಟ್ಟಿ, ತಿಲೋತ್ತಮ, ಸೀತಾರಾಮ ಶೆಟ್ಟಿ, ಶಿಕ್ಷಕಿ ಅನಿತಾ, ಸುಗಂಧಿ, ಆಂಗ್ಲ ಮಾಧ್ಯಮ ಶಿಕ್ಷಣ ಟ್ರಸ್ಟ್ ವಿನಯಕುಮಾರ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ದತ್ತಿ ನಿಧಿ ಹಸ್ತಾಂತರ, ಕ್ರೀಡಾಕೂಟದಲ್ಲಿ ಸ್ಪರ್ಧಿಸಿದ ವಿದ್ಯಾರ್ಥಿಗಳು, ಹಳೇ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಸರ್ಕಾರಿ ಶಾಲೆಗಳ ಪ್ರಗತಿಯಲ್ಲಿ ದಾನಿಗಳು, ಹಳೇ ವಿದ್ಯಾರ್ಥಿಗಳ ಕೊಡುಗೆ, ಶಿಕ್ಷಕರ ಶ್ರಮದಿಂದ ಸಾಧ್ಯವಿದೆ. ಮಕ್ಕಳಿಗೆ ರಾಷ್ಟ್ರಭಕ್ತಿ ಕಲಿಸುವ ಅನಿವಾರ್ಯತೆಯಿದೆ. -ಕೋಟ ಶ್ರೀನಿವಾಸ ಪೂಜಾರಿ ಸಂಸದ https://www.vijayavani.net/jakanachari-commemoration-day https://www.vijayavani.net/state-olympic-games-udupi