ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಮತ್ತು ರೋಟರಿ ಕ್ಲಬ್ ಗಂಗೊಳ್ಳಿ ಆಶ್ರಯದಲ್ಲಿ ಹಿಂದಿ ದಿನಾಚರಣೆಯಲ್ಲಿ ಕುಂದಾಪುರದ ಭಂಡಾರ್‌ಕಾರ್ಸ್‌ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಗೋವಿಂದ ಗೊಂಡ ಮಾತನಾಡಿದರು 
ಜಿಲ್ಲೆ

ಭಾಷೆಯಿಂದ ಬಾಂಧವ್ಯ ವೃದ್ಧಿ

ಗಂಗೊಳ್ಳಿ: ಭಾಷೆ ಬಾಂಧವ್ಯಗಳನ್ನು ಬೆಸೆಯುತ್ತದೆ. ದೇಶದ ಜನರ ಮನಸ್ಸುಗಳನ್ನು ಒಗ್ಗೂಡಿಸುವಲ್ಲಿ ಹಿಂದಿ ಭಾಷೆ ಪಾತ್ರ ಬಹಳ ಮಹತ್ವದ್ದು ಎಂದು ಕುಂದಾಪುರದ ಭಂಡಾರ್‌ಕಾರ್ಸ್‌ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಗೋವಿಂದ ಗೊಂಡ ಹೇಳಿದರು.

ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಮತ್ತು ರೋಟರಿ ಕ್ಲಬ್ ಗಂಗೊಳ್ಳಿ ಆಶ್ರಯದಲ್ಲಿ ಶನಿವಾರ ಹಿಂದಿ ದಿನಾಚರಣೆಯಲ್ಲಿ ಮಾತನಾಡಿದರು.

ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ. ಅಧ್ಯಕ್ಷತೆ ವಹಿಸಿದ್ದರು. ಸಯ್ಯಫ್, ಸಂಜನಾ, ಲೇಖಾ, ಪ್ರಥ್ವಿ, ಝುವೈನ ಮತ್ತು ಮೆಹಕ್ ಹಿಂದಿ ಮಹತ್ವದ ಹಾಡು ಹಾಡಿದರು. ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷೆ ಚಂದ್ರಕಲಾ ತಾಂಡೇಲ ಶುಭ ಹಾರೈಸಿದರು. ವಿದ್ಯಾರ್ಥಿಗಳಾದ ಶಬರೀಶ ಮತ್ತು ಮರೀಹಾ ಮಾತನಾಡಿದರು.

ಅಲೈನಾ ಸ್ವಾಗತಿಸಿ, ಹಿಂದಿ ಉಪನ್ಯಾಸಕ ನಾರಾಯಣ ಈ.ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಶ್ಮಿತಾ ಪ್ರಾರ್ಥಿಸಿ, ತನಿಷ್ಕಾ ಅತಿಥಿಗಳನ್ನು ಪರಿಚಯಿಸಿದರು. ಫಾತಿಮಾ ಕಾರ್ಯಕ್ರಮ ನಿರ್ವಹಿಸಿದರು. ಆನಿಯ ವಂದಿಸಿದರು.