ಮಂಗಳೂರು: ನಗರದ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳು ಸೋಮವಾರ ರಾತ್ರಿ ಪಾರ್ಟಿ ಮಾಡುತ್ತಿದ್ದ ನಗರದ ಪಬ್‌ಗೆ ಹಿಂದು ಸಂಘಟನೆ ಕಾರ್ಯಕರ್ತರು ದಾಳಿ ನಡೆಸಿದ್ದಾರೆ.
ನಗರದ ರಿ-ಸೈಕಲ್ ದಿ ಲಾಂಜ್ ಪಬ್‌ನಲ್ಲಿ ನಡೆಯುತ್ತಿದ್ದ ಪಾರ್ಟಿಯನ್ನು ಸ್ಥಗಿತಗೊಳಿಸಿ, ವಿದ್ಯಾರ್ಥಿಗಳನ್ನು ಹೊರಗೆ ಕಳುಹಿಸಲು ಕಾರ್ಯಕರ್ತರು ಮುಂದಾಗಿದ್ದರು. ಈ ವೇಳೆಗೆ ಪೊಲೀಸರೂ ಸ್ಥಳಕ್ಕೆ ಆಗಮಿಸಿದ್ದು, ಗೊಂದಲದ ವಾತಾವರಣ ಉಂಟಾಗಿತ್ತು. ಬಳಿಕ ಕಾಲೇಜು ವಿದ್ಯಾರ್ಥಿಗಳು ಪಾರ್ಟಿ ಸ್ಥಗಿತಗೊಳಿಸಿ ಹೊರಗೆ ನಡೆದಿದ್ದಾರೆ ಎಂದು ತಿಳಿದುಬಂದಿದೆ.
ಬೀಳ್ಕೊಡುಗೆ ಸಂಭ್ರಮದ ನೆಪದಲ್ಲಿ ಯುವಕ-ಯುವತಿಯರು ಪಾನಮತ್ತರಾಗಿ ಅನುಚಿತ ವರ್ತನೆ, ಮೋಜು ಮಸ್ತಿಯಲ್ಲಿ ತೊಡಗಿದ್ದರು ಎಂದು ಕಾರ್ಯಕರ್ತರು ಆರೋಪಿಸಿದ್ದಾರೆ.