ಜಿಲ್ಲೆ

ಹಿಂದುತ್ವ ಯಾವುದೇ ಪಕ್ಷದ ಸ್ವತ್ತಲ್ಲ!, ಶಾಸಕ ಶಿವರಾಮ ಹೆಬ್ಬಾರ ಹೇಳಿಕೆ

ಮುಂಡಗೋಡ: ಹಿಂದುತ್ವ ಯಾರಿಗಿಲ್ಲ, ನಾವೆಲ್ಲ ಹಿಂದೂಗಳೇ. ಹಿಂದುತ್ವ ಯಾವುದೇ ಪಕ್ಷಕ್ಕೆ ಸೇರಿದ್ದಲ್ಲ ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು.

ಭಾನುವಾರ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಆಗಮಿಸಿದ್ದ ಶಾಸಕ ಶಿವರಾಮ ಹೆಬ್ಬಾರ ಅವರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಇತ್ತೀಚೆಗೆ ಹಿಂದುತ್ವದ ಬಗ್ಗೆ ಮೃದು ಧೋರಣೆ ತಳೆದಿದ್ದು ಅವರು ಬಿಜೆಪಿ ಸೇರುತ್ತಾರೆಯೇ ಎಂಬ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ, ಅದನ್ನು ಅವರಿಗೆ ಕೇಳಬೇಕು. ಇದಕ್ಕೆ ನಾನು ಉತ್ತರಿಸುವುದಿಲ್ಲ. ಆದರೆ, ಹಿಂದುತ್ವ ಯಾವುದೇ ಪಕ್ಷದ ಸ್ವತ್ತಲ್ಲ. ಕಾಂಗ್ರೆಸ್ ಪಕ್ಷವೂ ಹಿಂದು ವಿರೋಧಿಯಲ್ಲ ಎಂದರು.