ಬೆಂಗಳೂರು: ಮುಂಗಾರು ದುರ್ಬಲಗೊಂಡ ಪರಿಣಾಮ ರಾಜ್ಯದ ಹಲವೆಡೆ ಸುರಿಯುತ್ತಿದ್ದ ಮಳೆಯು ದಕ್ಷಿಣ ಕರ್ನಾಟಕ ಮತ್ತು ಮಲೆನಾಡಿನ ಬಹುತೇಕ ಜಿಲ್ಲೆಗಳಲ್ಲಿ ಗುರುವಾರದಿಂದ ಕ್ಷೀಣವಾಗಿದೆ.
ಬೆಂ.ಗ್ರಾಮಾಂತರದ ದೊಡ್ಡಬಳ್ಳಾಪುರ,ಚಿಕ್ಕಬಳ್ಳಾಪುರ, ಚಿತ್ರದುರ್ಗದ ಹಿರಿಯೂರು, ದಕ್ಷಿಣ ಕನ್ನಡದ ಮಂಗಳೂರು, ದಾವಣಗೆರೆ, ಕಲಬುರಗಿ ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ಗುರುವಾರ ಸಾಧಾರಣ ವರ್ಷಧಾರೆಯಾಗಿದೆ. ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರಗಿ, ವಿಜಯಪುರ ಮತ್ತು ಯಾದಗಿರಿಯಲ್ಲಿ ಸೆ.27ರಂದು ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅರ್ಲಟ್ ಕೊಟ್ಟಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರಿನಲ್ಲಿ ಮುಂದಿನ 24 ಗಂಟೆ ಗುಡುಗು ಸಹಿತ ಸಾಧಾರಣ ಮಳೆ ಸುರಿಯಲಿದೆ. ಮುರ್ನಾಲ್ಕು ದಿನಗಳಿಂದ ಮಲೆನಾಡು, ದಕ್ಷಿಣ ಕರ್ನಾಟಕ ಭಾಗಗಳಲ್ಲಿ ಸುರಿಯುತ್ತಿದ್ದ ಮಳೆ ಇಳಿಮುಖವಾದರೆ, ಕರಾವಳಿ, ಉತ್ತರ ಕರ್ನಾಟಕದ ಭಾಗಗಳಲ್ಲಿ ಸೆ.28ರಿಂದ ಣವಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಅ.1ರಿಂದ ಹಿಂಗಾರು ಶುರು: ರಾಜ್ಯದಲ್ಲಿ ಪ್ರಸಕ್ತ ಸಾಲಿನ ಮುಂಗಾರು ಸೆ.30ರಂದು ಪೂರ್ಣಗೊಳ್ಳಲಿದ್ದು, ಅ.1ರಿಂದ ಹಿಂಗಾರು ಶುರುವಾಗಲಿದೆ. ಈ ಬಾರಿ ಹಿಂಗಾರು ಅವಧಿಯಲ್ಲಿ ವಾಡಿಕೆಯಷ್ಟೇ ವರ್ಷಧಾರೆಯಾಗಲಿದೆ ಎಂದು ಈಗಾಗಲೇ ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಅಂದಾಜು ಮಾಡಿದೆ. ಜೂನ್ನಿಂದ ಆಗಸ್ಟ್ವರೆಗೆ ಉತ್ತಮ ಮಳೆಯಾಗಿದ್ದ ರಾಜ್ಯದಲ್ಲಿ ಪ್ರಸ್ತುತ ತಿಂಗಳಲ್ಲಿ ಕೊರತೆಯಾಗಿದ್ದು, ಸೆ.1ರಿಂದ ಸೆ.26ರವರೆಗೆ ವಾಡಿಕೆಗಿಂತ ಶೇ.16ರಷ್ಟು ಕಡಿಮೆ ಸುರಿದಿದೆ. ದಣ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಶೇ.90ರಷ್ಟು ಮಳೆ ಕುಂಠಿತವಾಗಿದೆ.