ಜಿಲ್ಲೆ

ಹಿರಿಯಡಕ ಕಾಲೇಜಿನ ಕಾರ್ಯಾಲಯ ಉದ್ಘಾಟನೆ

ಇಂದಿರಾ ಎನ್ ಕೆ

ಹೆಬ್ರಿ: ಹಿರಿಯಡಕದ ಸರ್ಕಾರಿ ಪದವಿ ಪೂರ್ವ ಕಾಲೇಜು, ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಅಮೃತ ಮಹೋತ್ಸವ ಕಾರ್ಯಾಲಯ ಹಾಗೂ ಸಮಿತಿಯನ್ನು ಶಾಸಕ, ಅಮೃತ ಮಹೋತ್ಸವ ಸಮಿತಿ ಗೌರವಾಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿದರು.

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 12ನೇ ಸ್ಥಾನ ಪಡೆದ ಶ್ರಾವಿ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಕಾರ್ಯಾಧ್ಯಕ್ಷ ನಟರಾಜ್ ಹೆಗ್ಡೆ, ಕೃಷಿ ಅರ್ಥಶಾಸ್ತ್ರಜ್ಞ ಎನ್.ಎಸ್ ಶೆಟ್ಟಿ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರೀನಿವಾಸ್ ರಾವ್, ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಬಿ.ಎಲ್ ವಿಶ್ವಾಸ್ ಭಟ್, ಪ್ರಾಂಶುಪಾಲ ಮಂಜುನಾಥ್ ಭಟ್, ಅಮೃತ ಮಹೋತ್ಸವ ಸಮಿತಿಯ ಪದಾಧಿಕಾರಿಗಳು  ಉಪಸ್ಥಿತರಿದ್ದರು.