ಜಿಲ್ಲೆ

ಆಹಾರ ಗೋದಾಮಿಗೆ ಸಚಿವರ ಭೇಟಿ

Chitradurga

ಹಿರಿಯೂರು: ಇಲ್ಲಿನ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿರುವ ಆಹಾರ ಗೋದಾಮಿಗೆ ಸಚಿವ ಗೋಪಾಲಯ್ಯ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಗೋದಾಮಿನ ನಿರ್ವಹಣೆ, ಸ್ವಚ್ಛತೆ, ಪಡಿತರ ಆಹಾರ ಸಂಗ್ರಹ, ಪಡಿತರ ವಿತರಣೆ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಮನವಿ: ಹಿರಿಯೂರು ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ 7-8 ಕಿ.ಮೀ ವ್ಯಾಪ್ತಿಯಲ್ಲಿ ಪಡಿತರ ವಿತರಣೆ ಕೇಂದ್ರಗಳಿದ್ದು, ಗ್ರಾಮೀಣ ಭಾಗದ ಜನತೆಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಶಾಸಕಿ ಕೆ.ಪೂರ್ಣಿಮಾ ಸಚಿವರ ಗಮನಕ್ಕೆ ತಂದರು.

2 ಕಿ.ಮೀ ವ್ಯಾಪ್ತಿಯಲ್ಲಿ ಪಡಿತರ ವಿತರಣೆ ಕೇಂದ್ರ ತೆರೆಯಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಗೋಪಾಲಯ್ಯ ಭರವಸೆ ನೀಡಿದರು.

ಬಿಜೆಪಿ ಒಬಿಸಿ ಮೋರ್ಚಾ ರಾಜ್ಯಾಧ್ಯಕ್ಷ ಡಿ.ಟಿ.ಶ್ರೀನಿವಾಸ್, ಜಿಪಂ ಸದಸ್ಯೆ ರಾಜೇಶ್ವರಿ, ನಗರಸಭೆ ಮಾಜಿ ಅಧ್ಯಕ್ಷ ಟಿ.ಚಂದ್ರಶೇಖರ್, ಮಹೇಶ್ ಪಲ್ಲವ, ನಿರಂಜನ್ ಇತರರಿದ್ದರು.