ಜಿಲ್ಲೆ

ಹಿರಿಯೂರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಭೇಟಿ

Chitradurga

ಹಿರಿಯೂರು: ನಗರದಲ್ಲಿ ಭಾನುವಾರ ಆಯೋಜಿಸಿದ್ದ ವಿಭಾಗಮಟ್ಟದ ಬಿಜೆಪಿ ಜನಪ್ರತಿನಿಧಿಗಳು-ಪದಾಧಿಕಾರಿಗಳ ಸಭೆಯಲ್ಲಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪಾಲ್ಗೊಂಡಿದ್ದರು.

ಹುಳಿಯಾರು ರಸ್ತೆ ಹೋಟೆಲ್‌ವೊಂದರಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಪಾಲ್ಗೊಂಡು ಪಕ್ಷ ಸಂಘಟನೆ, ಮುಂಬರುವ ಎಂಎಲ್ಸಿ ಚುನಾವಣೆ ಸಿದ್ಧತೆ ಬಗ್ಗೆ ಚರ್ಚಿಸಿದರು.

ಸಂಸದರಾದ ಎ.ನಾರಾಯಣಸ್ವಾಮಿ, ಬಸವರಾಜ್, ಶಾಸಕರಾದ ಕೆ.ಪೂರ್ಣಿಮಾ, ಗೂಳಿಹಟ್ಟಿ ಡಿ.ಶೇಖರ್, ಎಂ.ಚಂದ್ರಪ್ಪ, ಜಿ.ಎಚ್.ತಿಪ್ಪಾರೆಡ್ಡಿ, ಎಂಎಲ್‌ಸಿ ವೈ.ಎ.ನಾರಾಯಣಸ್ವಾಮಿ, ಮಾಜಿ ಸಚಿವ ಸೊಗಡು ಶಿವಣ್ಣ, ಜಿಲ್ಲಾಧ್ಯಕ್ಷ ಮುರಳಿ, ಮುಖಂಡ ಜಿ.ಎಂ.ಸುರೇಶ್, ಚಿತ್ರದುರ್ಗ-ತುಮಕೂರು-ದಾವಣಗೆರೆ ಜಿಲ್ಲೆ ಜನಪ್ರತಿನಿಧಿಗಳು, ಜಿಲ್ಲಾ-ತಾಲೂಕು ಘಟಕದ ಪದಾಧಿಕಾರಿಗಳು ಭಾಗವಹಿಸಿದ್ದರು.

ಕರೊನಾ ಪರಿಸ್ಥಿತಿಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ಸಮರ್ಥವಾಗಿ ನಿಭಾಯಿಸಲಾಗಿದೆ. ಸೋಂಕು ಭೀತಿ ಕಾರಣಕ್ಕೆ ಸಾಮಾಜಿಕ ಜಾಲತಾಣದ ಮೂಲಕ ಪಕ್ಷದ ಸಂಘಟನೆಗೆ ಒತ್ತು ನೀಡಲಾಗಿದೆ.
ನಳೀನ್ ಕುಮಾರ್ ಕಟೀಲ್
ಬಿಜೆಪಿ ರಾಜ್ಯಾಧ್ಯಕ್ಷರು