ಹಿರಿಯೂರು: ಕರೊನಾ ವೈರಸ್ ನಿಯಂತ್ರಣಕ್ಕೆ ಇಡೀ ದೇಶವನ್ನೇ ಲಾಕ್ ಡೌನ್ ಮಾಡಿರುವ ಸಂದರ್ಭದಲ್ಲಿ ಸಮಾಜದ ರಕ್ಷಣೆ ಜವಾಬ್ದಾರಿ ಹೊತ್ತಿರುವ ಪೊಲೀಸರಿಗೆ ಅಗತ್ಯ ಸೌಲಭ್ಯಗಳು ಸಿಗುತ್ತಿಲ್ಲ.
ಅಕ್ಕ-ಪಕ್ಕದ ಜಿಲ್ಲೆಗಳಿಂದ ಹಿರಿಯೂರಿನಲ್ಲಿ ಕರ್ತವ್ಯಕ್ಕೆ ಬಂದಿರುವ ಪೊಲೀಸರಿಗೆ ಕುಡಿವ ನೀರು, ಮಾಸ್ಕ್, ಸ್ಯಾನಿಟೈಸರ್, ಸಮಯಕ್ಕೆ ಸರಿಯಾಗಿ ಊಟದ ವ್ಯವಸ್ಥೆ ಇಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಹೊರ ಜಿಲ್ಲೆಯಿಂದ ಕರ್ತವ್ಯಕ್ಕೆ ಬಂದಿರುವುದರಿಂದ ಸ್ಥಳೀಯವಾಗಿ ಯಾರು ಪರಿಚಯವಿಲ್ಲದೆ ಇರುವುದು ಹಾಗೂ ಕರೊನಾ ವೈರಸ್ ಭೀತಿಯಿಂದ ಸಾರ್ವಜನಿಕರಿಂದ ನೀರು ಕೇಳಲು ಸಾಧ್ಯವಾಗುತ್ತಿಲ್ಲ ಎಂದು ಅಳಲು ತೋಡಿಕೊಳ್ಳುತ್ತಿದ್ದಾರೆ.