ಜಿಲ್ಲೆ

ಛಲವಿದ್ದರ ಬದುಕಲ್ಲಿ ಭವಿಷ್ಯ ಉಜ್ವಲ

ಹಿರಿಯೂರು: ವಿದ್ಯಾರ್ಥಿಗಳಲ್ಲಿ ಸತತ ಪ್ರಯತ್ನ ಹಾಗೂ ನಿರ್ದಿಷ್ಟ ಗುರಿ ಹೊಂದಿದ್ದರೆ ಉಜ್ವಲ ಭವಿಷ್ಯ ಕಟ್ಟಿಕೊಳ್ಳಬಹುದು ಎಂದು ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಹೇಳಿದರು.

ನಗರದ ಗೌತಮ್ ಅಕಾಡೆಮಿ ಸ್ಕೂಲ್ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ಹಮ್ಮಿಕೊಂಡಿದ್ದ ವಾರ್ಷಿಕೋತ್ಸವದ ಸಾನ್ನಿಧ್ಯ ವಹಿಸಿ ಮಾತನಾಡಿದರು.

ಶಿಕ್ಷಣ ಸಂಸ್ಥೆಗಳು ವ್ಯಾಪಾರೀಕರಣ ಗೊಳಿಸುತ್ತಿರುವ ಈ ಸಂದರ್ಭದಲ್ಲಿ ಶೋಷಿತರ, ಬಡವರ ಹಾಗೂ ಸಮಾಜದಲ್ಲಿ ತುಳಿತಕ್ಕೆ ಒಳಪಟ್ಟ ಮಕ್ಕಳಿಗೆ ಸೇವಾ ಮನೋಭಾವದಿಂದ ಉತ್ತಮ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳು ವಿರಳ ಎಂದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ನಾಗರಾಜಪ್ಪ ಮಾತನಾಡಿ, ಪಿಯುಸಿ ಪರೀಕ್ಷೆ ಸಮೀಪಿಸಿದ್ದು, ವಿದ್ಯಾರ್ಥಿಗಳು ಹೆಚ್ಚಿನ ಸಮಯವನ್ನು ಓದಿಗೆ ಮೀಡಲಿಡಬೇಕು ಎಂದು ತಿಳಿಸಿದರು.

ಜಿಪಂ ಸದಸ್ಯೆ ಶಶಿಕಲಾ ಸುರೇಶ್‌ಬಾಬು ಮಾತನಾಡಿ, ಮಕ್ಕಳಿಗೆ ಶಿಕ್ಷಣದ ಜತೆಗೆ ಜೀವನದ ಮೌಲ್ಯಗಳು ಮತ್ತು ದೇಶಪ್ರೇಮವನ್ನು ಬೆಳೆಸಬೇಕು ಎಂದರು.

ಅರುಂಧತಿ ಎಜುಕೇಷನ್ ಮತ್ತು ಕಲ್ಚರಲ್ ಸಂಸ್ಥೆ ನಿರ್ದೇಶಕ ಬಿ.ಪಿ.ಪ್ರೇಮಸಾಗರ್ ಅಧ್ಯಕ್ಷತೆ ವಹಿಸಿದ್ದರು. ತಾಪಂ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ನಗರಸಭೆ ಸದಸ್ಯರಾದ ಗುಂಡೇಶ್ ಕುಮಾರ್, ಚಿತ್ರಜಿತ್ ಯಾದವ್, ಎಂ.ಡಿ.ಸಣ್ಣಪ್ಪ, ಡಾ.ಡಿ.ಧರಣೇಂದ್ರಯ್ಯ, ಲಲಿತಮ್ಮ ರಾಮಕೃಷ್ಣ, ರೈತ ಸಂಘದ ಅಧ್ಯಕ್ಷ ಕೆ.ಟಿ.ತಿಪ್ಪೇಸ್ವಾಮಿ, ವಿದ್ಯಾಸಂಸ್ಥೆ ಪ್ರಾಂಶುಪಾಲ ಬಿ.ಪಿ.ತಿಪ್ಪೇಸ್ವಾಮಿ, ವಾರ್ಡನ್ ಜಗನ್ನಾಥ್, ಅಬ್ದುಲ್ ಸರ್ದಾರ್ ಇದ್ದರು.

ತೋಟಗಾರಿಕೆ ವಿಶ್ವ ವಿದ್ಯಾಲಯದ ನಿವೃತ್ತ ಡೀನ್ ಚಂದ್ರಪ್ಪ, ಎಂಎಸ್ಸಿಯಲ್ಲಿ ರ‌್ಯಾಂಕ್ ಗಳಿಸಿದ ಎಂ.ಆರ್.ಅಮೃತಲಕ್ಷ್ಮೀ ಅವರನ್ನು ಗೌರವಿಸಲಾಯಿತು.