ಹಿರಿಯೂರು: ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಬೇಕು ಎಂದು ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು.
ಶುಕ್ರವಾರ ಅರಣ್ಯ ಇಲಾಖೆ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ 2 ಲಕ್ಷ ಸಸಿ ನೆಡುವ ಕಾರ್ಯಕ್ಕೆ ತಾಲೂಕಿನ ಗೌಡನಹಳ್ಳಿ ಗ್ರಾಮದಲ್ಲಿ ಚಾಲನೆ ನೀಡಿ ಮಾತನಾಡಿ, ಬಯಲು ಸೀಮೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಾಡನ್ನು ಬೆಳೆಸುವುದರಿಂದ ಕಾಲ ಕಾಲಕ್ಕೆ ಮಳೆ ಬೆಳೆಯಾಗಿ, ಉತ್ತಮ ಪರಿಸರದೊಂದಿಗೆ ನೆಮ್ಮದಿಯ ಜೀವನ ಕಟ್ಟಿಕೊಳ್ಳಬಹುದು ಎಂದರು.
ಜಿಪಂ ಸದಸ್ಯೆ ರಾಜೇಶ್ವರಿ ಮಾತನಾಡಿ, ಪರಿಸರ ದಿನಾಚರಣೆ ಕೇವಲ ಜೂನ್ 5ಕ್ಕೆ ಸೀಮಿತವಾಗದೆ ವರ್ಷ ಪೂರ್ತಿ ಸಸಿ ನೆಡುವ ಕಾರ್ಯಕ್ರಮ ಆಯೋಜಿಸಿ ಪರಿಸರ ಸಂರಕ್ಷಣೆ ಮಾಡಬೇಕು ಎಂದು ತಿಳಿಸಿದರು.
ತಾಪಂ ಸದಸ್ಯೆ ತಿಪ್ಪಮ್ಮ ನಾಗರಾಜ್, ಇಒ ಹನುಮಂತಪ್ಪ, ಡಿಸಿಸಿ ಬ್ಯಾಂಕ್ ನಿರ್ದೇಶಕ ದ್ಯಾಮಣ್ಣ, ಮುಖಂಡರಾದ ಮಂಜು, ಶ್ರೀಪತಿ, ಕುಮಾರಸ್ವಾಮಿ, ರಾಮಕೃಷ್ಣಪ್ಪ, ಇಂದ್ರಮ್ಮ, ಶಿವಣ್ಣ, ನಿರಂಜನ್, ನಗರಸಭೆ ಮಾಜಿ ಅಧ್ಯಕ್ಷ ಟಿ.ಚಂದ್ರಶೇಖರ್, ಮಹೇಶ್ ಪಲ್ಲವ ಇತರರಿದ್ದರು.