ಜಿಲ್ಲೆ

ಸಂಕಷ್ಟದಲ್ಲಿರುವವರಿಗೆ ನೆರವಿನ ಹಸ್ತ

ಹಿರಿಯೂರು: ಲಾಕ್‌ಡೌನ್ ಸಂಕಷ್ಟದಲ್ಲಿರುವವರಿಗೆ ನೆರವಿನ ಹಸ್ತ ಚಾಚಲು ಪ್ರತಿಯೊಬ್ಬರು ಮುಂದಾಗಬೇಕು ಎಂದು ಜಿಪಂ ಸದಸ್ಯೆ ಶಶಿಕಲಾ ಸುರೇಶ್ ಬಾಬು ಹೇಳಿದರು.

ತಾಲೂಕಿನ ಬಿದರಕೆರೆ ಗ್ರಾಮದಲ್ಲಿ ನೆಲೆಸಿರುವ ಮಹಾರಾಷ್ಟ್ರದ ಕೂಲಿ ಕಾರ್ಮಿಕರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ವತಿಯಿಂದ ಶುಕ್ರವಾರ ಆಹಾರ ಧಾನ್ಯದ ಕಿಟ್ ವಿತರಿಸಿ ಮಾತನಾಡಿದರು.

ಲಾಕ್‌ಡೌನ್‌ನಿಂದ ಕೂಲಿ ಕಾರ್ಮಿಕರಿಗೆ ಕೆಲಸವಿಲ್ಲದೆ ಕುಟುಂಬ ನಿರ್ವಹಣೆ ಕಷ್ಟವಾಗಿದೆ. ಉಳ್ಳವರು ಇಲ್ಲದವರಿಗೆ ನೆರವಿನ ಹಸ್ತ ಚಾಚುವುದು ಮಾನವೀಯ ಧರ್ಮ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಸಮಾಜಮುಖಿ ಕಾರ್ಯ ಶ್ಲಾಘನೀಯ ಎಂದರು.

ತಾಪಂ ಸದಸ್ಯ ಶಂಕರಮೂರ್ತಿ, ಎಪಿಎಂಸಿ ಅಧ್ಯಕ್ಷ ಜಗನ್ನಾಥ್, ಗ್ರಾಪಂ ಅಧ್ಯಕ್ಷೆ ಯಶೋದಮ್ಮ, ಧರ್ಮಸ್ಥಳ ಸಂಘದ ಪಾತಲಿಂಗಪ್ಪ, ಹನುಮಂತರಾಯಪ್ಪ, ಪ್ರತಾಪ್ ಸಿಂಹ, ಕೆಪಿಸಿಸಿ ಸದಸ್ಯ ಕಂದಿಕೆರೆ ಸುರೇಶ್ ಬಾಬು ಇತರರಿದ್ದರು.