ಜಿಲ್ಲೆ

ಮುಸುಕಿನ ಗುದ್ದಾಟಕ್ಕೆ ತೆರೆ ಎಳೆಯಲು ಯತ್ನ

Chitradurga

ಹಿರಿಯೂರು: ಮಂಡಲ ಅಧ್ಯಕ್ಷರ ಆಯ್ಕೆ ವಿಚಾರವಾಗಿ ಬಿಜೆಪಿ ತಾಲೂಕು ಘಟಕದಲ್ಲಿನ ಎರಡು ಗುಂಪುಗಳ ನಡುವಿನ ಉಂಟಾಗಿರುವ ಮುಸುಕಿನ ಗುದ್ದಾಟಕ್ಕೆ ಬ್ರೇಕ್ ಹಾಕಲು ಪಕ್ಷದ ಮುಖಂಡರು ಮುಂದಾಗಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಮುರಳಿ ನೇತೃತ್ವದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಗೊಂದಲಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಲಾಯಿತು.

ಪಕ್ಷಕ್ಕಿಂತ ಯಾರು ದೊಡ್ಡವರಲ್ಲ. ಇಲ್ಲಿ ವ್ಯಕ್ತಿಗೆ ಪೂಜೆಗೆ ಅವಕಾಶವಿಲ್ಲ, ಪಕ್ಷದ ತತ್ವ ಸಿದ್ಧಾಂತ ಅಳವಡಿಸಿಕೊಂಡು ಸಂಘಟನೆ ನಡೆಸುವಂತೆ ಕಾರ್ಯಕರ್ತರಿಗೆ ಸೂಚಿಸಲಾಯಿತು ಎನ್ನಲಾಗಿದೆ.