ಜಿಲ್ಲೆ

ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದನೆ

Chitradurga

ಹಿರಿಯೂರು: ಕಳೆದ ಐದು ವರ್ಷಗಳಲ್ಲಿ ಶಿಕ್ಷಣ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರದ ಮಟ್ಟದಲ್ಲಿ ಹೋರಾಟ ನಡೆಸಲಾಗಿದೆ ಎಂದು ಎಂಎಲ್‌ಸಿ ಚೌಡರೆಡ್ಡಿ ತೂಪಲ್ಲಿ ಹೇಳಿದರು.

ನಗರದ ಜೆಡಿಎಸ್ ಕಚೇರಿಗೆ ಭೇಟಿ ನೀಡಿ ಪರಿಷತ್ ಚುನಾವಣೆ ಕಾರ್ಯತಂತ್ರದ ಬಗ್ಗೆ ಕಾಯಕರ್ತರೊಂದಿಗೆ ಸಮಾಲೋಚಿಸಿ ಮಾತನಾಡಿ, ಆಗ್ನೇಯ ಪದವೀಧರ ಕ್ಷೇತ್ರದಿಂದ ಜೆಡಿಎಸ್ ಟಿಕೆಟ್ ಖಚಿತವಾಗಿದೆ ಎಂದರು.

ಜೆಡಿಎಸ್ ಯುವ ಘಟಕ ಜಿಲ್ಲಾಧ್ಯಕ್ಷ ಪ್ರತಾಪ್ ಜೋಗಿ, ಜೆಡಿಎಸ್ ಕಾನೂನು ವಿಭಾಗದ ಅಧ್ಯಕ್ಷ ಶಿವಶಂಕರ್, ವಕೀಲ ಟಿ.ಸಂಜಯ್‌ಕುಮಾರ್, ಸಂಘಟನಾ ಕಾರ್ಯದರ್ಶಿ ರಮೇಶ್, ಆಶೋಕ, ಪ್ರಶಾಂತ್, ಧನಂಜಯ್ ಇತರರಿದ್ದರು.