ಜಿಲ್ಲೆ

ಹಣ್ಣು-ತರಕಾರಿ ಖರೀದಿಸಲು ಸೂಚನೆ

Chitradurga

ಹಿರಿಯೂರು: ಲಾಕ್‌ಡೌನ್ ಹಿನ್ನೆಲೆಯಲ್ಲಿ ತೋಟಗಾರಿಕೆ ಬೆಳೆಗಾರರು ಸಂಕಷ್ಟದಲ್ಲಿದ್ದು, ರೈತರಿಂದ ನೇರವಾಗಿ ಹಣ್ಣು-ತರಕಾರಿ ಖರೀದಿಸಿ ಮಾರಾಟ ಮಾಡುವಂತೆ ತೋಟಗಾರಿಕೆ ಇಲಾಖೆ ಅಧಿಕಾರಿಗಳಿಗೆ ಶಾಸಕಿ ಕೆ.ಪೂರ್ಣಿಮಾ ಸೂಚಿಸಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಕೃಷಿ ಉತ್ಪನ್ನ ಮುಕ್ತವಾಗಿ ಸಾಗಿಸಲು ಸರ್ಕಾರ ಅನುಮತಿ ನೀಡಿದ್ದು, ಹಣ್ಣು, ತರಕಾರಿ, ಹೂವಿ ಮಾರಾಟಕ್ಕೆ ತಕ್ಷಣ ಅಗತ್ಯ ಕ್ರಮಕೈಗೊಂಡು ರೈತರಿಗೆ ನೆರವಾಗಬೇಕು ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.