ನಾಯಕನಹಟ್ಟಿ: ತುರುವನೂರು ಹೋಬಳಿಯ ಗ್ರಾಮಗಳಿಗೆ ತುಂಗಭದ್ರಾ ಹಿನ್ನೀರು ಪೂರೈಸುವ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.
ಮುದ್ದಾಪುರದಲ್ಲಿ ಗುರುವಾರ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿ, ತುರುವನೂರು ಹೋಬಳಿ ಮೊದಲಿನಿಂದ ನೀರಿನ ಬವಣೆ ಎದುರಿಸುತ್ತ ಬಂದ ಕಾರಣ ತುಂಗಭದ್ರಾ ಹಿನ್ನೀರು ಯೋಜನೆಯಡಿ ಈ ಹೋಬಳಿ ಸೇರಿಸಲಾಗಿದೆ ಎಂದರು.
ಕುಡಿವ ನೀರಿನ ಜತೆಗೆ ಕೆರೆಗಳಿಗೆ ನೀರು ತುಂಬಿಸಿದರೆ ಅಂತರ್ಜಲ ವೃದ್ಧಿಯಾಗಿ ರೈತರಿಗೆ ಅನುಕೂಲವಾಗುತ್ತದೆ ಎಂದು ಗ್ರಾಮಸ್ಥರು ಇದೇ ವೇಳೆ ಮನವಿ ಸಲ್ಲಿಸಿದರು.
ಮನವಿ ಸ್ವೀಕರಿಸಿದ ಶಾಸಕರು, ಈ ಕುರಿತು ನೀರಾವರಿ ಸಚಿವರ ಬಳಿ ಚರ್ಚಿಸಿದ್ದು, ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಕೆರೆಗಳಿಗೆ ನೀರು ತುಂಬಿಸುವ ಕೆಲಸಕ್ಕೆ ಆದ್ಯತೆ ನೀಡಲಾಗುವುದು ಎಂದರು.
ಗ್ರಾಪಂ ಅಧ್ಯಕ್ಷೆ ಚಂದ್ರಮ್ಮ, ಉಪಾಧ್ಯಕ್ಷೆ ಲಕ್ಷ್ಮೀದೇವಿ, ಜಿಪಂ ಅಧ್ಯಕ್ಷೆ ಶಶಿಕಲಾ ಸುರೇಶ್ ಬಾಬು, ಸದಸ್ಯ ಕೆಜಿಟಿ ಗುರುಮೂರ್ತಿ, ಆರೋಗ್ಯ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ನರಸಿಂಹಮೂರ್ತಿ, ಮಾಜಿದ ಸದಸ್ಯ ಬಾಬುರೆಡ್ಡಿ, ತಾಪಂ ಅಧ್ಯಕ್ಷ ಡಿ.ಎಂ.ಲಿಂಗರಾಜು, ಉಪಾಧ್ಯಕ್ಷೆ ಶಾಂತಮ್ಮ ಇತರರಿದ್ದರು.