ಜಿಲ್ಲೆ

ಕೂಲಿ ಕಾರ್ಮಿಕರಿಗೆ ದಿನಸಿ ಕಿಟ್ ವಿತರಣೆ

Chitradurga

ಹಿರಿಯೂರು: ತಾಲೂಕಿನಲ್ಲಿ ಲಾಕ್‌ಡೌನ್ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಿ, ಜನರ ಸುರಕ್ಷತೆಗೆ ಆದ್ಯತೆ ನೀಡಲಾಗಿದೆ ಎಂದು ತಹಸೀಲ್ದಾರ್ ಸತ್ಯನಾರಾಯಣ ಹೇಳಿದರು.

ತಾಲೂಕಿನ ಬಿದರಕೆರೆ ಬಳಿ ನೆಲೆಸಿರುವ ಮಹಾರಾಷ್ಟ್ರದ ಕೂಲಿ ಕಾರ್ಮಿಕರಿಗೆ ಸೋಮವಾರ ಆಹಾರದ ಕಿಟ್ ವಿತರಿಸಿ ಮಾತನಾಡಿದರು.

ಕರೊನಾ ಮಹಾಮಾರಿ ನಿಯಂತ್ರಣಕ್ಕೆ ಜನರ ಸಹಕಾರ ಅಗತ್ಯ. ಅನಗತ್ಯ ಓಡಾಟಕ್ಕೆ ಕಡಿವಾಣ ಹಾಕಿ, ಸರ್ಕಾರದ ಸೂಚನೆ ಪಾಲಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂದು ಹೇಳಿದರು.

ಹೊರ ರಾಜ್ಯದಿಂದ ತಾಲೂಕಿಗೆ ಆಗಮಿಸಿರುವ ವ್ಯಕ್ತಿಗಳನ್ನು ಗುರುತಿಸಿ ಕ್ವಾರಂಟೈನ್ ಮಾಡಲಾಗಿದೆ. ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಎಪಿಎಂಸಿ ಅಧ್ಯಕ್ಷ ಗೊಲ್ಲಹಳ್ಳಿ ಜಗನ್ನಾಥ್, ನಿರಂಜನಮೂರ್ತಿ, ಚಿತ್ತಪ್ಪ, ತಿಪ್ಪೇಸ್ವಾಮಿ ಇತರರಿದ್ದರು.